alex Certify
ಕನ್ನಡ ದುನಿಯಾ       Mobile App
       

Kannada Duniya

ಎನ್ ಕೌಂಟರ್ ನಲ್ಲಿ ಉಗ್ರ ಫಿನಿಶ್

kashmir-encounter

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಭಾಗದಲ್ಲಿ ಪಾಕ್ ಪ್ರೇರಿತ ಉಗ್ರರು ನುಸುಳಿದ್ದು, ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.

ಶೋಪಿಯಾನ್ ಜಿಲ್ಲೆಯಲ್ಲಿ ಹಲವು ಉಗ್ರರು ನುಸುಳಿದ ಬಗ್ಗೆ ಮಾಹಿತಿ ಪಡೆದ ಗಡಿಭದ್ರತಾ ಪಡೆಯ ಯೋಧರು, ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆಗ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಉಗ್ರರು ಮತ್ತು ಸೇನೆ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ.

ಶ್ರೀನಗರದಿಂದ ಸುಮಾರು 60 ಕಿಲೋ ಮೀಟರ್ ದೂರದಲ್ಲಿರುವ ಡಾಬ್ಜನ್ ಗ್ರಾಮದಲ್ಲಿ ಭಾರತೀಯ ಸೇನೆ ಉಗ್ರರನ್ನು ಸದೆ ಬಡಿಯಲು ಕಾರ್ಯಾಚರಣೆ ಮುಂದುವರೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...