alex Certify
ಕನ್ನಡ ದುನಿಯಾ       Mobile App
       

Kannada Duniya

3 ವರ್ಷದ ಮಗುವಿನ ಮೇಲೂ ಕರುಣೆ ಬರಲಿಲ್ಲ : ಗ್ರೆನೇಡ್, ನಂತ್ರ ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಭಯೋತ್ಪಾದಕರು ಶೋಪಿಯಾನ್ ನ ಜನನಿಬಿಡಿ ಮಾರುಕಟ್ಟೆ ಬಟ್ಪೋರದಲ್ಲಿ ಗ್ರೆನೇಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಜಮ್ಮು-ಕಾಶ್ಮೀರ ಪೊಲೀಸ್ ಸಿಬ್ಬಂದಿ ಸೇರಿದಂತೆ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಮೂರು ವರ್ಷದ ಮಗುವೊಂದರ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನೂ ಶೋಪಿಯಾನ್ನಲ್ಲಿರುವ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಂಜಾನ್ ತಿಂಗಳಾದ ಕಾರಣ  ಮಾರುಕಟ್ಟೆಯಲ್ಲಿ ಜನರ ಸಂಖ್ಯೆ ಹೆಚ್ಚಿತ್ತು. 2 ಗಂಟೆ ಸುಮಾರಿಗೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.

ಗ್ರೆನೇಡ್ ಶಬ್ಧ ಕೇಳುತ್ತಿದ್ದಂತೆ ಜನರು ಭಯಗೊಂಡು ಓಡಲು ಶುರು ಮಾಡಿದ್ದಾರೆ. ತಮ್ಮನ್ನು ರಕ್ಷಿಸಿಕೊಳ್ಳಲು ಮುಂದಾದ ಭಯೋತ್ಪಾದಕರು ಕಂಡ ಕಂಡವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಮೂರು ವರ್ಷದ ಮಗುವಿನ ಮೇಲೂ ಕರುಣೆ ತೋರದ ಪಾಪಿಗಳು ಗುಂಡು ಹಾರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...