alex Certify
ಕನ್ನಡ ದುನಿಯಾ       Mobile App
       

Kannada Duniya

ಮಿರ್ ಬಜಾರ್ ನಲ್ಲಿ ಉಗ್ರರ ಅಟ್ಟಹಾಸ

terror-rr

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಜನನಿಬಿಡ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಿ ನಾಲ್ವರನ್ನು ಹತ್ಯೆ ಮಾಡಿದ್ದಾರೆ.

ಕುಲ್ಗಾಂನ ಮಿರ್ ಬಜಾರ್ ನಲ್ಲಿ ಗುಂಡು ಹಾರಿಸಿ ಇಬ್ಬರು ಪೊಲೀಸರು, ಇಬ್ಬರು ನಾಗರೀಕರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಹೆಚ್ಚಿನ ಯೋಧರು ಧಾವಿಸಿದ್ದು, ಈ ಪ್ರದೇಶದಲ್ಲಿ ಅವಿತಿರುವ ಉಗ್ರರನ್ನು ಸದೆ ಬಡಿಯಲು ಕಾರ್ಯಾಚರರಣೆ ನಡೆಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು, ಭಾರತೀಯ ಸೇನೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...