alex Certify
ಕನ್ನಡ ದುನಿಯಾ       Mobile App
       

Kannada Duniya

ಯೋಧರೊಂದಿಗೆ ರಕ್ಷಾಬಂಧನ ಆಚರಿಸಿದ ಸ್ಮೃತಿ ಇರಾನಿ

SMRITI RAKHEEಕೇಂದ್ರ ಸಚಿವೆ ಸ್ಮೃತಿ ಇರಾನಿ ಈ ಬಾರಿ ರಕ್ಷಾಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಜಮ್ಮು-ಕಾಶ್ಮೀರದ ಸಿಯಾಚಿನ್ ನಲ್ಲಿರುವ ಸೇನೆಯ ಯೋಧರಿಗೆ ರಾಖಿ ಕಟ್ಟುವ ಮೂಲಕ ಗೌರವ ಸೂಚಿಸಿದ್ದಾರೆ.

ಇಂಡಿಯನ್ ಏರ್ ಫೋರ್ಸ್ ಹೆಲಿಕಾಪ್ಟರ್ ನಲ್ಲಿ ಸಿಯಾಚಿನ್ ಗೆ ತೆರಳಿದ ಸ್ಮೃತಿ ಇರಾನಿ, 20 ಯೋಧರಿಗೆ ರಾಖಿ ಕಟ್ಟುವ ಮೂಲಕ ಶುಭ ಹಾರೈಸಿದ್ದಾರೆ. ಅಷ್ಟೇ ಅಲ್ಲ ತಾವೇ ಸ್ವತಃ ಮಾಡಿದ ಸಿಹಿಯನ್ನು ಸೈನಿಕರಿಗೆ ಹಂಚಿದ್ದಾರೆ. ಯೋಧರನ್ನುದ್ದೇಶಿಸಿ ಮಾತನಾಡಿದ ಅವರು, ನಿಮಗೆ ಇಡೀ ದೇಶವೇ ಋಣಿಯಾಗಿದೆ ಎಂದ್ರು.

ಗಡಿ ಕಾಯುವ ನನ್ನ ಸಹೋದರರೊಂದಿಗೆ ಹಬ್ಬ ಆಚರಿಸುತ್ತಿರುವುದು ನನ್ನ ಸೌಭಾಗ್ಯ ಅಂತಾ ಬಣ್ಣಿಸಿದ್ರು. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಜಲಸಂಪನ್ಮೂಲ ಸಚಿವೆ ಉಮಾ ಭಾರತಿ, ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಕೂಡ ಗಡಿಯಲ್ಲಿರುವ ಯೋಧರ ಜೊತೆ ಮಾತುಕತೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...