alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರವೆಸಗಿ ಸಾಮಾಜಿಕ ಜಾಲತಾಣಕ್ಕೆ ವಿಡಿಯೋ ಹರಿಬಿಟ್ರು

ಮಹಾರಾಷ್ಟ್ರದಿಂದ ಆಘಾತಕಾರಿ ಘಟನೆಯೊಂದು ನಡೆದಿದೆ. ಮೂವರು ಹುಡುಗ್ರು 16 ವರ್ಷದ ಹುಡುಗಿಯನ್ನು ಕಾಡಿನಲ್ಲಿ ಅತ್ಯಾಚಾರವೆಸಗಿ ಅದ್ರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆರೋಪಿಗಳು ಶಹಪುರ ತಾಲೂಕಿನ ಗ್ರಾಮವೊಂದರ ನಿವಾಸಿಗಳಾಗಿದ್ದಾರೆ. ಅಪ್ರಾಪ್ತೆಯನ್ನು ಬಲವಂತವಾಗಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಘಟನೆ ಹಿಂದಿನ ವರ್ಷ ನವೆಂಬರ್ ನಲ್ಲಿ ನಡೆದಿದೆಯಂತೆ. ಆದ್ರೆ ಪೀಡಿತೆ ಫೆಬ್ರವರಿ 9ರಂದು ದೂರು ದಾಖಲಿಸಿದ್ದಳಂತೆ.

ಮೂವರು ಆರೋಪಿಗಳು 24 ವರ್ಷ ವಯಸ್ಸಿನೊಳಗಿನವರಾಗಿದ್ದಾರೆ. ಒಬ್ಬ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿಯಾಗಿದ್ದರೆ ಮತ್ತಿಬ್ಬರು ಕೂಲಿ ಕೆಲಸ ಮಾಡ್ತಾರೆ. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 

 

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...