alex Certify
ಕನ್ನಡ ದುನಿಯಾ       Mobile App
       

Kannada Duniya

ಜನನಿಬಿಡ ರಸ್ತೆಯಲ್ಲಿ ಉರುಳಿ ಬಿತ್ತು ಆಸಿಡ್ ಹೊತ್ತೊಯ್ಯುತ್ತಿದ್ದ ಟ್ರಕ್

thane-7ಆಸಿಡ್ ಡ್ರಮ್ ಗಳನ್ನು ಸಾಗಿಸುತ್ತಿದ್ದ ಟ್ರಕ್ ಒಂದು, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಜನನಿಬಿಡ ರಸ್ತೆಯಲ್ಲಿ ಇಂದು ಬೆಳಿಗ್ಗೆ ಉರುಳಿ ಬಿದ್ದಿದ್ದು, ಆತಂಕಕ್ಕೆ ಕಾರಣವಾದ ಘಟನೆ ನಡೆದಿದೆ.

ಮಹಾರಾಷ್ಟ್ರದ ಥಾಣೆಯ ಘಾಯ್ಮುಖ್ ಆಕ್ಟ್ರಾಯ್ ಪೋಸ್ಟ್ ಬಳಿ ವೇಗವಾಗಿ ಬಂದ ಟ್ರಕ್, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಉರುಳಿ ಬಿದ್ದಿದೆ. ಅಪಘಾತದಲ್ಲಿ ಟ್ರಕ್ ಚಾಲಕ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರಕ್ ಉರುಳಿ ಬಿದ್ದಿದ್ದರಿಂದ ಅದರಲ್ಲಿದ್ದ ಡ್ರಮ್ ನಿಂದ ಹೈಡ್ರೋಕ್ಲೋರಿಕ್ ಆಸಿಡ್ ಸೋರಲಾರಂಭಿಸಿದೆ. ಮುಂದಾಗಬಹುದಾದ ಅನಾಹುತವನ್ನು ಗ್ರಹಿಸಿದ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದು, ಸನಿಹದಲ್ಲಿದ್ದ ಶಾಲೆಗೆ ರಜೆ ಘೋಷಿಸಿ ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...