alex Certify
ಕನ್ನಡ ದುನಿಯಾ       Mobile App
       

Kannada Duniya

2024 ರ ಬಳಿಕ ಪ್ರಧಾನಿ ಸ್ಥಾನಕ್ಕೆ ಪ್ರಯತ್ನಿಸಿ ಎಂದಿದ್ದಾರೆ ಈ ನಾಯಕ

ಕೇಂದ್ರ ಸಚಿವ ಹಾಗೂ ಜನಶಕ್ತಿ ನಾಯಕರಾದ ರಾಮ್ ವಿಲಾಸ್ ಪಾಸ್ವಾನ್, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ಹುದ್ದೆ ಖಾಲಿ ಇಲ್ಲ. ನರೇಂದ್ರ ಮೋದಿಯವರು ಮುಂದಿನ ಪ್ರಧಾನಮಂತ್ರಿಯಾಗಿ ಮುಂದುವರಿಯಲಿದ್ದಾರೆ. ನೀವು 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ಹುದ್ದೆಗಾಗಿ ಪ್ರಯತ್ನ ಪಡಬಹುದು ಎಂದು ಕಾಂಗ್ರೆಸ್ ನಾಯಕರಿಗೆ ಸಲಹೆ ನೀಡಿದ್ದಾರೆ.

ನಾವು ಎರಡು ವರ್ಷಗಳಿಂದ ಇದನ್ನು ಮತ್ತೆ ಮತ್ತೆ ಹೇಳುತ್ತಿದ್ದೇವೆ. ನರೇಂದ್ರ ಮೋದಿಯವರು ಮುಂದಿನ ಚುನಾವಣೆಯ ನಂತರ ಪ್ರಧಾನಿಯಾಗಿ ಮುಂದುವರಿಯುವುದು ಖಾತರಿ ಎಂದು ತಿಳಿಸಿದ್ದಾರೆ. ಈಗಾಗಲೇ ನರೇಂದ್ರ ಮೋದಿಯವರು ನಾಲ್ಕು ವರ್ಷದ ಆಡಳಿತವನ್ನು ನಡೆಸಿದ್ದು, ಹಿಂದೆ ನಡೆಸಿದ ಎಲ್ಲಾ ಸರಕಾರಗಳಿಗಿಂತಲೂ ಅತ್ಯುತ್ತಮ ಆಡಳಿತವನ್ನು ಕೊಟ್ಟಿದ್ದಾರೆ. ಹಾಗೂ ಇದು ಮುಂದಿನ ಅವಧಿಯಲ್ಲಿಯೂ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿಯವರು ವಿನಮ್ರ ವ್ಯಕ್ತಿಯಾಗಿದ್ದು, ದಿನದ 24 ಗಂಟೆಯಲ್ಲಿ ಇಪ್ಪತ್ತು ಗಂಟೆ ಕೆಲಸವನ್ನು ಮಾಡುತ್ತಿದ್ದಾರೆ. ದೀನದಲಿತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...