alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡದಲ್ಲಿ ಭಾಷಣ ಮಾಡಿದ ವಿಡಿಯೋ ಪೋಸ್ಟ್ ಮಾಡಿದ ಸುಷ್ಮಾ ಸ್ವರಾಜ್

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಾವು ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲ ಕನ್ನಡದಲ್ಲೂ ಸುಲಲಿತವಾಗಿ ಮಾತನಾಡಬಲ್ಲೆ ಎಂಬುದನ್ನು ತೋರಿಸಲು ತಮ್ಮ ಭಾಷಣದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

1999 ರ ವಿಡಿಯೋ ಕ್ಲಿಪ್ ಇದಾಗಿದ್ದು, ಕರ್ನಾಟಕದ ಬಳ್ಳಾರಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಸುಷ್ಮಾ ಸ್ವರಾಜ್, ಸ್ಪಷ್ಟವಾಗಿ ಕನ್ನಡವನ್ನು ಮಾತನಾಡಲು ಕಲಿತಿದ್ದರು. ಈಗ ತಮ್ಮ ಭಾಷಣದ ಹಳೆಯ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.

ವಿಶ್ವ ಸಂಸ್ಥೆಯಲ್ಲಿ ಹಿಂದಿಯನ್ನು ಅಧಿಕೃತ ಭಾಷೆಯಾಗಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಮುಂದೆ ತಮಿಳುನಾಡು ಅಥವಾ ಪಶ್ಚಿಮ ಬಂಗಾಳದವರು ಪ್ರಧಾನಿಯಾದರೆ ಹಿಂದಿ ಮಾತನಾಡಬೇಕೇ ಎಂದು ಪ್ರಶ್ನಿಸಿದ್ದರು. ಇದಕ್ಕೆ ತಿರುಗೇಟು ನೀಡುವಂತೆ ಸುಷ್ಮಾ ಸ್ವರಾಜ್ ತಮ್ಮ ಕನ್ನಡ ಭಾಷಣದ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಭಾರತೀಯ ಭಾಷೆಗಳ ಬಗ್ಗೆ ತಮಗೆ ಹೆಮ್ಮೆಯಿದ್ದು, ಕೆಲ ಭಾಷೆಯನ್ನು ಸುಲಲಿತವಾಗಿ ಮಾತನಾಡಬಲ್ಲೇ ಎಂದು ಸುಷ್ಮಾ ಸ್ವರಾಜ್ ತಮ್ಮ ಟ್ವೀಟ್ ನಲ್ಲಿ ಹೇಳಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...