alex Certify
ಕನ್ನಡ ದುನಿಯಾ       Mobile App
       

Kannada Duniya

ನೋಟು ನಿಷೇಧದ ಬಗ್ಗೆ ಮೋದಿ ಪತ್ನಿ ಹೇಳಿದ್ದಿಷ್ಟು….

modi-wife

ಪ್ರಧಾನಿ ನರೇಂದ್ರ ಮೋದಿ ಅವರ ಪರಿತ್ಯಕ್ತ ಪತ್ನಿ ಜಶೋದಾಬೆನ್, ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋಟಾದಲ್ಲಿ ನಡೆದ ಅಖಿಲ ಭಾರತೀಯ ರಾಷ್ಟ್ರೀಯ ಅಧಿವೇಶನದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ರು. ಪ್ರಧಾನಿ ಮೋದಿ ಅವರ ನೋಟು ನಿಷೇಧ ನಿರ್ಧಾರದಿಂದ ದೇಶದ ಜನತೆಗೆ ಒಳಿತಾಗಲಿದೆ ಅಂತಾ ಹೇಳಿದ್ರು.

500 ಮತ್ತು 1000 ರೂಪಾಯಿ ನಿಷೇಧದಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಜೊತೆಗೆ ಕಪ್ಪುಹಣಕ್ಕೂ ಬ್ರೇಕ್ ಹಾಕಿದಂತಾಗಿದೆ. ನೋಟು ನಿಷೇಧದ ಮೂಲಕ ವಿದೇಶದಲ್ಲಿರುವ ಕಪ್ಪು ಹಣವನ್ನು ವಾಪಸ್ ತರಬಹುದು ಅನ್ನೋ ಆಶಾವಾದ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲ ಮೋದಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಶೋದಾಬೆನ್, ಎನ್ ಡಿ ಎ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ ಎಂದ್ರು. ದೇಶದ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಮೋದಿ ಅವರು ಉತ್ತಮ ಕಾರ್ಯನಿರ್ವಹಣೆಯನ್ನು ಮುಂದುವರಿಸಲಿದ್ದಾರೆ ಅಂತಾ ಭರವಸೆ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...