alex Certify
ಕನ್ನಡ ದುನಿಯಾ       Mobile App
       

Kannada Duniya

ಉಪ ಚುನಾವಣೆಯಲ್ಲಿ ಸೋತ ಬಿ.ಜೆ.ಪಿ.ಗೆ ಮತ್ತೊಂದು ‘ಬಿಗ್’ ಶಾಕ್…!

ಹೈದರಾಬಾದ್: ರಾಜಸ್ತಾನದಲ್ಲಿ 2 ಲೋಕಸಭೆ ಮತ್ತು 1 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬಿ.ಜೆ.ಪಿ.ಗೆ, ಆಂಧ್ರಪ್ರದೇಶದಲ್ಲಿ ಭಾರೀ ಹಿನ್ನಡೆಯಾಗುವ ಸಾಧ್ಯತೆ ಕಂಡು ಬಂದಿದೆ.

ಎನ್.ಡಿ.ಎ. ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಟಿ.ಡಿ.ಪಿ. ಮೈತ್ರಿಕೂಟದಿಂದ ಹೊರಗೆ ಬರುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಶಿವಸೇನೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದೆ.

ಇತ್ತ ಆಂಧ್ರದಲ್ಲಿಯೂ ಬಿ.ಜೆ.ಪಿ.ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಘೋಷಿಸಿದಲ್ಲಿ ಬಿ.ಜೆ.ಪಿ. ಬೆಂಬಲಿಸುವುದಾಗಿ ವೈ.ಎಸ್.ಆರ್. ಕಾಂಗ್ರೆಸ್ ನಾಯಕ ಜಗನ್ ಮೋಹನ್ ರೆಡ್ಡಿ ಹೇಳಿದ್ದರು. ಆಂಧ್ರದಲ್ಲಿ ಆಡಳಿತ ಪಕ್ಷವಾಗಿರುವ ತೆಲುಗು ದೇಶಂ ಪಾರ್ಟಿ(TDP) ಎನ್.ಡಿ.ಎ. ಮೈತ್ರಿಕೂಟದ ಪಕ್ಷವಾಗಿದ್ದರಿಂದ ರಾಜಧಾನಿ ಅಮರಾವತಿ ನಿರ್ಮಾಣಕ್ಕೆ, ಪೊಲಾವರಂ ಪ್ರಾಜೆಕ್ಟ್ ಗೆ ಕೇಂದ್ರ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿತ್ತು. ಆದರೆ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ನಲ್ಲಿ ಯಾವುದೇ ಅನುದಾನವನ್ನು ನೀಡಿಲ್ಲ.

ಇದರಿಂದ ತೀವ್ರ ಅಸಮಾಧಾನಗೊಂಡಿರುವ ಟಿ.ಡಿ.ಪಿ. ನಾಯಕರು ಎನ್.ಡಿ.ಎ. ಮೈತ್ರಿಕೂಟವನ್ನು ತೊರೆಯಲು ತೀರ್ಮಾನಿಸಿದ್ದಾರೆ. ಭಾನುವಾರ ಪಕ್ಷದ ನಾಯಕರ ಸಭೆ ನಡೆಯಲಿದ್ದು, ಮೈತ್ರಿಕೂಟದಿಂದ ಹೊರಬರುವ ತೀರ್ಮಾನವನ್ನು ಕೈಗೊಳ್ಳಲಾಗುವುದು.

ಆಂಧ್ರಪ್ರದೇಶದ ಪ್ರಮುಖ ಯೋಜನೆಗಳಿಗೆ ಕೇಂದ್ರ ಅನುದಾನ ಒದಗಿಸಿಲ್ಲ. ರಾಜ್ಯದ ಜನ ನಿರಾಶರಾಗಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಆಂಧ್ರ ಅಗತ್ಯತೆಗಳ ಬಗ್ಗೆ ಕೇಂದ್ರ ತಿಳಿದಿಲ್ಲ. ಇದು ನಿರಾಶಾದಾಯಕ ಬಜೆಟ್ ಎಂದು ಟೀಕಿಸಿದ್ದಾಗಿ ಟಿ.ಡಿ.ಪಿ. ಸಂಸದ ಟಿ.ಜಿ. ವೆಂಕಟೇಶ್ ತಿಳಿಸಿದ್ದಾರೆ.

ನಮ್ಮ ಮುಂದೆ ಹಲವು ಆಯ್ಕೆಗಳಿವೆ. ಮೈತ್ರಿಕೂಟದಿಂದ ಹೊರ ಬರುವುದು ಒಂದಾಗಿದೆ ಎಂದು ಅವರು ಹೇಳಿದ್ದು, ಭಾನುವಾರ ನಡೆಯಲಿರುವ ಟಿ.ಡಿ.ಪಿ. ನಾಯಕರ ಸಭೆ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...