alex Certify
ಕನ್ನಡ ದುನಿಯಾ       Mobile App
       

Kannada Duniya

ಕೇರಳ ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್..!

kerala helmet

ಸುಪ್ರೀಂ ಕೋರ್ಟ್ ಆದೇಶದಂತೆ ದೇಶದಲ್ಲಿ ದ್ವಿಚಕ್ರವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಬೈಕ್ ಚಾಲನೆ ಮಾಡುವವರು ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಹೇಳಲಾಗಿದೆ. ಆದೇಶ ಜಾರಿಯಾದರೂ, ಕೆಲವು ಸವಾರರು ಸರಿಯಾಗಿ ನಿಯಮ ಪಾಲಿಸುತ್ತಿಲ್ಲ.

ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ, ಪೆಟ್ರೋಲ್ ಕೊಡದಂತೆ ಕೇರಳ ಪೊಲೀಸರು ಪೆಟ್ರೋಲ್ ಬಂಕ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ. ಕೇರಳದ ಕಣ್ಣಾಪುರಂ ಪೊಲೀಸರು ಹೀಗೊಂದು ನಿಯಮವನ್ನು ಜಾರಿಗೆ ತಂದಿದ್ದಾರೆ. ಕಣ್ಣಾಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಭೀಕರವಾದ 28 ಬೈಕ್ ಅಪಘಾತಗಳು ಸಂಭವಿಸಿದ್ದು, ಇದರಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೆ ಕೆಲವರ ಅಂಗಾಂಗಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.

ಹೀಗೆ, ಹೆಲ್ಮೆಟ್ ಧರಿಸದ ಕಾರಣ ಜೀವಹಾನಿ ಸಂಭವಿಸಿರುವುದನ್ನು ಮನಗಂಡ ಕಣ್ಣಾಪುರಂ ಪೊಲೀಸರು, ಪೆಟ್ರೋಲ್ ಬಂಕ್ ಮಾಲೀಕರಿಗೆ, ಇನ್ನುಮುಂದೆ ಹೆಲ್ಮೆಟ್ ಧರಿಸದವರಿಗೆ ಪೆಟ್ರೋಲ್ ಹಾಕಬೇಡಿ ಎಂದು ಸೂಚನೆ ನೀಡಿದ್ದಾರೆ. ಇದಕ್ಕೆ ಬಂಕ್ ಮಾಲೀಕರು ಕೂಡ ಸ್ಪಂದಿಸಿದ್ದು, ಈ ಮೂಲಕ ಕಣ್ಣಾಪುರಂ ವ್ಯಾಪ್ತಿಯಲ್ಲಿ ಹೆಲ್ಮೆಟ್ ಕಡ್ಡಾಯ ಆದೇಶ ಕಟ್ಟುನಿಟ್ಟಾಗಿ ಜಾರಿಗೆ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...