alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಈ ಮಹಿಳೆಯ ವಿಡಿಯೋ

up-ma

ಲಖ್ನೋ: ಮೈ ಮುಟ್ಟಿದ್ದನ್ನು ಪ್ರಶ್ನಿಸಿದ ಮಹಿಳೆಯೊಬ್ಬರ ಮೇಲೆ, ಕಿರಾತಕರು ಮನಬಂದಂತೆ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ನಡೆದಿದೆ.

ಪತಿ, ಮಗುವಿನೊಂದಿಗೆ ಮಹಿಳೆ ಹೋಗುತ್ತಿದ್ದ ಸಂದರ್ಭದಲ್ಲಿ ಇಬ್ಬರು ದುಷ್ಕರ್ಮಿಗಳು ಅನುಚಿತವಾಗಿ ವರ್ತಿಸಿದ್ದಾರೆ. ಇದನ್ನು ಪ್ರಶ್ನಿಸಿದ ಮಹಿಳೆಯ ಮೇಲೆಯೇ ಹಲ್ಲೆ ನಡೆಸಿ, ಬಡಿಗೆಗಳಿಂದ ತಲೆಗೆ ಹೊಡೆದಿದ್ದಾರೆ.

ಜನ ನಿಬಿಡ ಪ್ರದೇಶದಲ್ಲಿಯೇ ಈ ಘಟನೆ ನಡೆದಿದ್ದು, ತಲೆಯಿಂದ ರಕ್ತ ಸೋರುತ್ತಿದ್ದರೂ, ಅಲ್ಲಿದ್ದ ಜನ ಮಾತ್ರ ಮಹಿಳೆಯ ಸಹಾಯಕ್ಕೆ ಬಂದಿಲ್ಲ.

ಮಹಿಳೆಯ ಪತಿ ಕೂಡ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದಾರೆ. ಸ್ಥಳದಲ್ಲಿದ್ದ ಮಗು ಅಳುತ್ತಿರುವ ದೃಶ್ಯ ಮನಕಲಕುವಂತಿತ್ತು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಹಿಳೆ ಪೊಲೀಸರಿಗೆ ಹೇಳಿದ್ದಾಳೆ.

ಇದೆಲ್ಲವನ್ನು ಸೆರೆಹಿಡಿದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. 52 ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...