alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಯೋಗಿ ಅದಿತ್ಯನಾಥ್

yogi_mpತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿರುವ ಸಂಸದ ಯೋಗಿ ಅದಿತ್ಯನಾಥ್ ಮತ್ತೊಮ್ಮೆ ಅಂತಹುದೇ ಹೇಳಿಕೆ ನೀಡಿದ್ದು, ವಿವಾದ ಸೃಷ್ಟಿಸಿದ್ದಾರೆ.

ಜೈಸಲ್ಮೇರ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ‘ಭಾರತ್ ಮಾತಾ ಕೀ ಜೈ’ ಎಂದು ಹೇಳಲು ಯಾರು ಹಿಂದೇಟು ಹಾಕುತ್ತಾರೋ ಅಂತವರು ತಮ್ಮ ತಾಯಿಯನ್ನೇ ಸಂಶಯಿಸಿದಂತೆ ಎಂಬ ಹೇಳಿಕೆ ನೀಡಿದ್ದಾರೆ.

ಜೊತೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಮುನ್ನಡೆಸುತ್ತಿರುವುದು ಕೆಲವರಿಗೆ ಸಹಿಸಲಾಗುತ್ತಿಲ್ಲ. ಅಂತವರು ಅಸಹಿಷ್ಣುತೆ ಸೃಷ್ಟಿಸುತ್ತಿದ್ದಾರೆಂದು ಆರೋಪಿಸಿರುವ ಯೋಗಿ ಅದಿತ್ಯನಾಥ್, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯವೆಸಗಲಾಗುತ್ತಿದ್ದು, ಮಾನವ ಹಕ್ಕುಆಯೋಗ ಈ ಕುರಿತಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...