alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಲೂ ವೇಲ್ ಗೇಮ್ : ಕೊನೆ ಹಂತದಲ್ಲಿ ಮೂವರ ರಕ್ಷಣೆ

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಬ್ಲೂ ವೇಲ್ ಗೇಮ್ ನ ಕೊನೆ ಹಂತದ ಆಟವಾಡ್ತಿದ್ದ ಮೂವರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಒಬ್ಬ ವಿದ್ಯಾರ್ಥಿ ಶಾಲೆಯ ಮೊದಲ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ಅದೃಷ್ಟವಶಾತ್ ಬದುಕುಳಿದಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಇಲ್ಲಿನ ಸರ್ಕಾರಿ ಶಾಲೆಯೊಂದರ ಒಂಭತ್ತನೇ ತರಗತಿ ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ಬ್ಲೂ ವೇಲ್ ಗೇಮ್ ಆಟವಾಡಿದ್ದಾರೆ. ಕೊನೆ ಹಂತದಲ್ಲಿ ಒಬ್ಬ ವಿದ್ಯಾರ್ಥಿ ಶಾಲೆ ಕಟ್ಟಡದಿಂದ ಕೆಳಗೆ ಜಿಗಿದಿದ್ದಾನೆ. ಶಾಲೆ ಸಮಯ ಮುಗಿಯುತ್ತಿದ್ದ ಸಮಯವಾಗಿದ್ದರಿಂದ ಶಿಕ್ಷಕರಿಗೆ ಶಬ್ಧ ಕೇಳಿದೆ. ಸ್ಥಳಕ್ಕೆ ಬಂದು ನೋಡಿದಾಗ ವಿದ್ಯಾರ್ಥಿ ನೆಲದ ಮೇಲೆ ಬಿದ್ದಿದ್ದ ಎನ್ನಲಾಗಿದೆ.

ಆತನ ಕೈಗೆ ಗಾಯವಾಗಿದ್ದು ಚಿಕಿತ್ಸೆ ನೀಡಲಾಗಿದೆ. ಮೊದಲ ಮಹಡಿ ಮೇಲೆ ಇನ್ನಿಬ್ಬರು ವಿದ್ಯಾರ್ಥಿಗಳು ನಿಂತಿದ್ದರು ಎನ್ನಲಾಗಿದೆ. ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ಬುದ್ಧಿ ಹೇಳಲಾಗಿದೆ. ಎಲ್ಲರೂ ಬ್ಲೂ ವೇಲ್ ಗೇಮ್ ಆಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇದು ಮೊದಲ ಘಟನೆಯಾಗಿದೆ. ಕೇರಳ, ಉತ್ತರ ಪ್ರದೇಶ, ದೆಹಲಿ, ರಾಜಸ್ತಾನ ಹಾಗೂ ಮುಂಬೈನಲ್ಲಿ ಬ್ಲೂ ವೇಲ್ ಗೇಮ್ ಗೆ ಮಕ್ಕಳು ಬಲಿಯಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...