alex Certify
ಕನ್ನಡ ದುನಿಯಾ       Mobile App
       

Kannada Duniya

ಗಣೇಶ ಚತುರ್ಥಿ ಸಂಗಮ ಸ್ನಾನದ ವೇಳೆ ದುರಂತ

ಅಲಹಾಬಾದ್: ಉತ್ತರ ಪ್ರದೇಶದ ಅಲಹಾಬಾದ್ ತ್ರಿವೇಣಿ ಸಂಗಮದಲ್ಲಿ ನೀರಿಗಿಳಿದ ಮೂವರು ಯುವಕರು ಸಾವನ್ನಪ್ಪಿದ್ದಾರೆ.

ಗಣೇಶ ಚತುರ್ಥಿ ಪ್ರಯುಕ್ತ ಸಂಗಮದಲ್ಲಿ ಸ್ನಾನ ಮಾಡಿದರೆ ಒಳಿತಾಗುತ್ತದೆ ಎಂಬ ನಂಬಿಕೆ ಇದೆ. ಅಂತೆಯೇ ಗಣೇಶ ಚತುರ್ಥಿ ಮಾರನೇ ದಿನ ಸ್ನಾನಕ್ಕೆ ಬಂದಿದ್ದ ಮೂವರು ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ.

ಅಲ್ಲಿದ್ದವರು ರಕ್ಷಿಸುವ ಪ್ರಯತ್ನ ನಡೆಸಿದರೂ, ಮೂವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹಬ್ಬದ ಪ್ರಯುಕ್ತ ಸಂಗಮದಲ್ಲಿ ಸ್ನಾನಕ್ಕೆ ಹೆಚ್ಚಿನ ಜನ ಬರುವ ಹಿನ್ನಲೆಯಲ್ಲಿ ಸಕಲ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಆದರೆ, ಸೂಚನೆಯನ್ನು ಮೀರಿ ಕೆಲವರು ಅಪಾಯಕಾರಿ ಸ್ಥಳದಲ್ಲಿ ನೀರಿಗಿಳಿದ ಕಾರಣ ದುರಂತ ಸಂಭವಿಸಿದೆ.

ನೀರಿನಲ್ಲಿ ಮುಳುಗಿ ಮೃತಪಟ್ಟವರ ಶವಗಳಿಗಾಗಿ ಹುಡುಕಾಟ ನಡೆಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...