alex Certify
ಕನ್ನಡ ದುನಿಯಾ       Mobile App
       

Kannada Duniya

ತ್ಯಾಜ್ಯ ವಿಲೇವಾರಿಗೆ ಆಗ್ರಹಿಸಿ ಮೂವರು ಯುವಕರು ಏನು ಮಾಡಿದ್ರು ಗೊತ್ತಾ…?

ಚೆನ್ನೈ: ರಸ್ತೆ ಪಕ್ಕದಲ್ಲಿ ತ್ಯಾಜ್ಯ ಸುರಿಯುವ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ದಿವ್ಯ ನಿರ್ಲಕ್ಷ್ಯಕ್ಕೆ ಬೇಸತ್ತ ಮೂವರು ಯುವಕರು ಮೊಬೈಲ್ ಟವರ್ ಏರಿ ಕುಳಿತು ನಗರ ಪಾಲಿಕೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಘಟನೆ ತಿರುಮಲೈ ಅಲ್ವಾಪುರಂ ಮುಖ್ಯರಸ್ತೆಯಲ್ಲಿ ನಡೆದಿದೆ.

ಸ್ಥಳೀಯ ಪ್ರದೇಶದಲ್ಲಿ ತ್ಯಾಜ್ಯ ತಂದು ಸುರಿಯುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ ಯುವಕರು, ಕೊನೆಗೆ 150 ಅಡಿ ಎತ್ತರದ ಮೊಬೈಲ್ ಟವರ್ ಏರಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ದಿನಕರನ್(35), ಪ್ರಭಾಕರನ್(24) ಹಾಗೂ ವಿಕ್ರಮ್(36) ಎಂಬ ಯುವಕರು ಅಲ್ವಾಪುರಂ ಮುಖ್ಯರಸ್ತೆಯಲ್ಲಿರುವ ಮೊಬೈಲ್ ಟವರ್ ನ್ನು ಮುಂಜಾನೆ 6 ಗಂಟೆಗೆ ಏರಿ ಕುಳಿತಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಕೆಳಗಿಳಿಯುವಂತೆ ಯುವಕರನ್ನು ಎಷ್ಟೇ ಮನವೊಲಿಸಲು ಯತ್ನಿಸಿದರೂ ಪಟ್ಟು ಬಿಡದ ಯುವಕರು ತ್ಯಾಜ್ಯ ಸುರಿಯುವ ಲಾರಿ ಮಾಲೀಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ. ಯುವಕರ ಒತ್ತಾಯಕ್ಕೆ ಮಣಿದ ಪೊಲೀಸರು ಲಾರಿ ಚಾಲಕ ಅರೋಕಿಯಾ ರಾಜ(40) ಎಂಬಾತನನ್ನು ಬಂಧಿಸಿದ್ದಾರೆ. ಬಳಿಕ ಯುವಕರು ಟವರ್ ನಿಂದ ಇಳಿದಿದ್ದಾರೆ. ಮೂವರಲ್ಲಿ ದಿನಕರನ್ ಎಂಬಾತ ಅರೆ ಪ್ರಜ್ಞಾವಸ್ಥೆಯಲ್ಲಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...