alex Certify
ಕನ್ನಡ ದುನಿಯಾ       Mobile App
       

Kannada Duniya

ಕರುಣಾನಿಧಿಯವರ ಅಂತ್ಯಸಂಸ್ಕಾರದ ಸ್ಥಳಕ್ಕೆ ಸಂಬಂಧಿಸಿದಂತೆ ನಡೆದಿದೆ ಹಗ್ಗಜಗ್ಗಾಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ನಾಯಕ ಎಂ. ಕರುಣಾನಿಧಿ ಇಂದು ಸಂಜೆ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 94 ವರ್ಷದ ಕರಣಾನಿಧಿಯವರು ಕಳೆದ 12 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ.

ಇಂದು ಸಂಜೆ ಕರುಣಾನಿಧಿಯವರ ನಿಧನದ ಸುದ್ದಿಯನ್ನು ಕಾವೇರಿ ಆಸ್ಪತ್ರೆ ವೈದ್ಯರು ಅಧಿಕೃತವಾಗಿ ಘೋಷಿಸುತ್ತಿದ್ದಂತೆಯೇ, ಡಿಎಂಕೆ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಇದರ ಮಧ್ಯೆ ಕರುಣಾನಿಧಿಯವರ ಅಂತ್ಯಸಂಸ್ಕಾರದ ಸ್ಥಳದ ಕುರಿತಂತೆ ಭುಗಿಲೆದ್ದಿರುವ ವಿವಾದವೂ ಆಕ್ರೋಶಕ್ಕೆ ಕಾರಣವಾಗಿದ್ದು, ರೊಚ್ಚಿಗೆದ್ದವರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

ಚೆನ್ನೈನ ಮರೀನಾ ಬೀಚ್ ನಲ್ಲಿ ಕರುಣಾನಿಧಿಯವರ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಕುಟುಂಬಸ್ಥರು ಹಾಗೂ ಅಭಿಮಾನಿಗಳ ಮನವಿಯಾಗಿದ್ದು, ಆದರೆ ಇದನ್ನು ತಳ್ಳಿಹಾಕಿರುವ ಆಡಳಿತಾರೂಢ ಎಐಎಡಿಎಂಕೆ ಸರ್ಕಾರ, ಹಾಲಿ ಮುಖ್ಯಮಂತ್ರಿಗಳಾಗಿದ್ದವರು ನಿಧನರಾದ ಸಂದರ್ಭದಲ್ಲಿ ಮರೀನಾ ಬೀಚ್ ನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕರುಣಾನಿಧಿಯವರು ಮಾಜಿ ಮುಖ್ಯಮಂತ್ರಿಗಳಾಗಿರುವ ಕಾರಣ ಗಾಂಧಿ ಮಂಟಪದ ಬಳಿಯಿರುವ ಎರಡು ಎಕರೆ ಪ್ರದೇಶದಲ್ಲಿ ಅಂತ್ಯ ಸಂಸ್ಕಾರ ಮಾಡಬೇಕೆಂದು ಸೂಚಿಸಿದೆ.

ಇದಕ್ಕೆ ಕರುಣಾನಿಧಿ ಅವರ ಕುಟುಂಬಸ್ಥರು ಹಾಗೂ ಡಿಎಂಕೆ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಐದು ಬಾರಿ ತಮಿಳುನಾಡಿನ ಮುಖ್ಯಮಂತ್ರಿಗಳಾಗಿದ್ದ ಕರುಣಾನಿಧಿಯವರ ಅಂತ್ಯಸಂಸ್ಕಾರವನ್ನು ಅಣ್ಣಾದೊರೈ, ಎಂ.ಜಿ. ರಾಮಚಂದ್ರನ್ ಹಾಗೂ ಜಯಲಲಿತಾ ಅವರ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಂತೆ ಮರೀನಾ ಬೀಚ್ ನಲ್ಲಿಯೇ ಸ್ಥಳಾವಕಾಶ ಕಲ್ಪಿಸಬೇಕೆಂದು ಪಟ್ಟುಹಿಡಿದಿದ್ದಾರೆ. ಜೊತೆಗೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಎಂಕೆ ನಾಯಕರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ರಾತ್ರಿಯೇ ವಿಚಾರಣೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...