alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿ ತಿಮ್ಮಪ್ಪನಿಗೆ ದುಬಾರಿ ಕಿರೀಟ

tir

ವಿಶ್ವದ ಶ್ರೀಮಂತ ದೇವಾಲಯ ಎಂದೇ ಪ್ರಸಿದ್ಧಿಯಾಗಿರುವ ತಿರುಪತಿ ತಿರುಮಲ ದೇವಾಲಯಕ್ಕೆ ವರ್ಷದ ಎಲ್ಲಾ ದಿನಗಳಲ್ಲಿಯೂ ಭಕ್ತರು ಭೇಟಿ ಕೊಡುತ್ತಾರೆ. ಹೀಗೆ ಬರುವ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗೆ ಹರಕೆ ತೀರಿಸುತ್ತಾರೆ. ಕಾಣಿಕೆ ಸಲ್ಲಿಸುತ್ತಾರೆ.

ಕೆಲವು ಭಕ್ತರು ದುಬಾರಿ ಮೊತ್ತದ ಬೆಲೆ ಬಾಳುವ ಕಾಣಿಕೆಯನ್ನು ಸಲ್ಲಿಸುತ್ತಾರೆ. ಇತ್ತೀಚೆಗಷ್ಟೇ ತಿರುಪತಿ ತಿಮ್ಮಪ್ಪನ ಭಕ್ತರೊಬ್ಬರು ಸುಮಾರು 2 ಕೋಟಿ ರೂ . ಬೆಲೆ ಬಾಳುವ ವಜ್ರಖಚಿತ ಫುಟ್ ಬಾಲ್ ಅನ್ನು ಕಾಣಿಕೆ ಹುಂಡಿಯಲ್ಲಿ ಹಾಕಿದ್ದರು. ಇದೀಗ ತಮಿಳುನಾಡಿನ ಕೊಯಮತ್ತೂರಿನ ತಿಮ್ಮಪ್ಪನ ಭಕ್ತರೊಬ್ಬರು ವಜ್ರಖಚಿತ ಕಿರೀಟವನ್ನು ಕಾಣಿಕೆಯಾಗಿ ನೀಡಿದ್ದಾರೆ. ತಮ್ಮ ಹರಕೆ ತೀರಿಸಲು ಪತ್ನಿ ಜೊತೆಗೆ ಬಂದಿದ್ದ ಕೊಯಮತ್ತೂರಿನ ಭಕ್ತರು 90 ಲಕ್ಷ ರೂ. ಮೌಲ್ಯದ ಕಿರೀಟವನ್ನು ಕಾಣಿಕೆಯಾಗಿ ನೀಡಿದ್ದಾರೆ.

ತಿರುಪತಿ ತಿರುಮಲ ದೇವಾಲಯ ಸಮಿತಿ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದು, ತಮಿಳುನಾಡಿನ ಕೊಯಮತ್ತೂರಿನ ಭಕ್ತರೊಬ್ಬರು 90 ಲಕ್ಷ ರೂ ಮೌಲ್ಯದ ವಜ್ರ ಖಚಿತ ಕಿರೀಟ ನೀಡಿದ್ದಾರೆ. ಆದರೆ ಅವರ ಕೋರಿಕೆಯಂತೆ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...