alex Certify
ಕನ್ನಡ ದುನಿಯಾ       Mobile App
       

Kannada Duniya

ದೊಣ್ಣೆಯಿಂದ ಬೈಕ್ ಸವಾರನ ತಲೆ ಹೊಡೆದ ಎಸ್ಐ

ತಮಿಳುನಾಡಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೈಕ್ ಸವಾರರು ಹೆಲ್ಮೆಟ್ ಧರಿಸಿರಲಿಲ್ಲವೆಂಬ ಕಾರಣಕ್ಕೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬ ತನ್ನ ದೊಣ್ಣೆಯಿಂದ ಬೈಕ್ ಸವಾರನಿಗೆ ಬಲವಾಗಿ ಹೊಡೆದಿದ್ದು, ಇದರಿಂದಾಗಿ ಆತನಿಗೆ ಗಾಯವಾಗಿದೆ.

ಕನ್ಯಾಕುಮಾರಿ ಜಿಲ್ಲೆಯ ತಮಿಳುನಾಡು-ಕೇರಳ ಗಡಿ ಭಾಗದ ಕಲುಪಾಲಂನಲ್ಲಿ ಗುರುವಾರದಂದು ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರು ಹೆಲ್ಮೆಟ್ ಧರಿಸದವರ ತಪಾಸಣೆ ನಡೆಸುತ್ತಿದ್ದ ವೇಳೆ ರಾಕೇಶ್ ಎಂಬಾತ ತನ್ನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಬಂದಿದ್ದಾನೆ.

ಬೈಕ್ ಸವಾರ ಹೆಲ್ಮೆಟ್ ಧರಿಸದಿರುವುದನ್ನು ದೂರದಿಂದಲೇ ಗಮನಿಸಿದ ಸಬ್ ಇನ್ಸ್ ಪೆಕ್ಟರ್ ತನ್ನ ಬಳಿಯಿದ್ದ ದೊಣ್ಣೆಯಿಂದ ತಲೆಗೆ ಬೀಸಿದ್ದು, ಸವಾರ ಕೊಂಚದರಲ್ಲಿ ತಪ್ಪಿಸಿಕೊಂಡರೆ ಹಿಂಬದಿ ಸವಾರನಿಗೆ ಗಾಯವಾಗಿ ರಕ್ತಸ್ರಾವವಾಗಿದೆ. ಈ ದೃಶ್ಯಾವಳಿ ಸನಿಹದಲ್ಲಿ ಅಳವಡಿಸಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಕೆಲ ಸಮಯದಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೀಗ ತಪ್ಪಿತಸ್ಥ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...