alex Certify
ಕನ್ನಡ ದುನಿಯಾ       Mobile App
       

Kannada Duniya

ಈಶಾನ್ಯ ರೈಲ್ವೆಯಲ್ಲಿ ಮಹಿಳಾ ಸುರಕ್ಷತೆಗೆ ಹೊಸ ಹೆಜ್ಜೆ

ದೇಶದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ರಾತ್ರಿಯಿರಲಿ ಹಾಡಹಗಲೇ ನಡೆದಿರುವ ಕೆಲ ಅಹಿತಕರ ಘಟನೆಗಳು ಇದನ್ನು ಪುಷ್ಟೀಕರಿಸುತ್ತವೆ. ಈ ಹಿನ್ನಲೆಯಲ್ಲಿ ಸರ್ಕಾರಗಳು ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುತ್ತಿದೆ. ಇದಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದೆ.

ಇದೇ ರೀತಿ ಮಹಿಳಾ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈಶಾನ್ಯ ರೈಲ್ವೆ, ರಾತ್ರಿ ವೇಳೆ ರೈಲುಗಳಲ್ಲಿ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ಚಿಂತಿಸಿದೆ. ಅಲ್ಲದೆ ಪ್ಯಾನಿಕ್ ಬಟನ್ ಗಳನ್ನು ಸ್ಥಾಪಿಸಲು ಯೋಚಿಸುತ್ತಿದೆ.

ಸಬ್- ಅರ್ಬನ್ ರೈಲುಗಳಲ್ಲಿ ರಾತ್ರಿ ಪಾಳೆಯಕ್ಕೆ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ಈಗಾಗಲೇ ಆರ್ ಪಿ ಎಫ್ ನಲ್ಲಿ ನೇಮಕಾತಿ ನಡೆಯುತ್ತಿದೆ. ಅಲ್ಲದೆ ಎಲ್ಲಾ ರೈಲ್ವೆ ಕೋಚ್ ಗಳಲ್ಲಿ ಪ್ಯಾನಿಕ್ ಬಟನ್ ಇರಿಸಲಾಗ್ತಿದ್ದು, ಅದು ರೈಲ್ವೆ ಸಿಬ್ಬಂದಿ ಇರುವ ಕೋಚ್ ಗೆ ಸಂಪರ್ಕ ಹೊಂದಿರುತ್ತದೆ ಎಂದು ಈಶಾನ್ಯ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಾದವ್ ತಿಳಿಸಿದ್ದಾರೆ.

ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಈ ಪ್ಯಾನಿಕ್ ಬಟನ್ ಗಳನ್ನು ವಿದ್ಯುತ್ ಸ್ವಿಚ್ ಗಳ ಮೇಲೆ ಇರಿಸಲಾಗುತ್ತದೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಈ ಬಟನ್ ಒತ್ತಿದ್ರೆ ರೈಲಿನಲ್ಲಿರುವ ಸಿಬ್ಬಂದಿ ಸ್ಥಳಕ್ಕೆ ಹಾಜರಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...