alex Certify
ಕನ್ನಡ ದುನಿಯಾ       Mobile App
       

Kannada Duniya

ಎನ್ ಕೌಂಟರ್ ನಲ್ಲಿ ಜೈಶ್ ಉಗ್ರ ಸಂಘಟನೆಯ ನಾಯಕ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸಾಂಬೂರಾ ಪ್ರದೇಶದಲ್ಲಿ ನಡೆಸಿದ ಎನ್ ಕೌಂಟರ್ ನಲ್ಲಿ ಭಯೋತ್ಪಾದಕರಿಬ್ಬರನ್ನು ಹೊಡೆದುರುಳಿಸಲಾಗಿದೆ.

ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಪ್ರಮುಖ ನೂರ್ ಮೊಹಮ್ಮದ್ ತಾಂತ್ರೇ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2015 ರ ನಂತರದಲ್ಲಿ ಪೆರೋಲ್ ನಲ್ಲಿದ್ದ ನೂರ್ ಮೊಹಮ್ಮದ್, ಈ ವರ್ಷದ ಆರಂಭದಲ್ಲಿ ಶ್ರೀನಗರ ವಿಮಾನ ನಿಲ್ದಾಣದ ನಡೆದ ಆತ್ಮಹತ್ಯಾ ದಾಳಿಯ ಸೂತ್ರಧಾರಿಯಾಗಿದ್ದ. ಎನ್ ಕೌಂಟರ್ ನಲ್ಲಿ ಆತನನ್ನು ಹತ್ಯೆ ಮಾಡಲಾಗಿದ್ದು, ಜೈಶ್ ಸಂಘಟನೆಗೆ ದೊಡ್ಡ ಪೆಟ್ಟು ಬಿದ್ದಂತಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...