alex Certify
ಕನ್ನಡ ದುನಿಯಾ       Mobile App
       

Kannada Duniya

ಕಲ್ಲು ತೂರಾಟಕ್ಕೆ ಬಲಿಯಾದ ಪ್ರವಾಸಿಗ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಲ್ಲು ತೂರಾಟದಲ್ಲಿ ತಮಿಳುನಾಡು ಪ್ರವಾಸಿಗ ಮೃತಪಟ್ಟಿದ್ದಾರೆ. ‘ನಾಗರಿಕ ಹತ್ಯೆ ಪ್ರಕರಣ’ ವಿರೋಧಿಸಿ ಶ್ರೀನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ನಡೆದ ಕಲ್ಲು ತೂರಾಟದಲ್ಲಿ ತಮಿಳುನಾಡು ಪ್ರವಾಸಿಗ ಆರ್. ತಿರುಮಾನಿ ಮೃತಪಟ್ಟಿದ್ದಾರೆ.

ಅವರು ಕಾರಿನಲ್ಲಿ ಹೋಗುವಾಗ ನಡೆದ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸೌರಾದಲ್ಲಿರುವ ಎಸ್.ಕೆ.ಐ.ಎಂ.ಎಸ್. ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಈ ಘಟನೆಯಿಂದಾಗಿ ದುಃಖವಾಗಿದೆ. ತಲೆತಗ್ಗಿಸುವಂತಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದು, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಕೂಡ ಘಟನೆಯನ್ನು ಖಂಡಿಸಿದ್ದಾರೆ. ಪ್ರವಾಸಿಗರು ನಮ್ಮ ಅತಿಥಿಗಳಾಗಿದ್ದಾರೆ. ಕಲ್ಲು ತೂರಾಟದಲ್ಲಿ ಪ್ರವಾಸಿಗ ಮೃತಪಟ್ಟಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...