alex Certify
ಕನ್ನಡ ದುನಿಯಾ       Mobile App
       

Kannada Duniya

ಪಂಜಾಬ್, ಹರಿಯಾಣದಲ್ಲಿ ಹೈ ಅಲರ್ಟ್

ಚಂಡೀಗಡ: ಸ್ವಯಂ ಘೋಷಿತ ದೇವಮಾನವ, ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಕುಲ ಜಿಲ್ಲಾ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಪಂಜಾಬ್, ಹರಿಯಾಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಗುರ್ಮಿತ್ ವಿರುದ್ಧವಾಗಿ ತೀರ್ಪು ಬಂದರೆ ಭಕ್ತರು ಹಿಂಸಾಚಾರಕ್ಕೆ ಇಳಿಯುವ ಸಾಧ್ಯತೆ ಇದೆ.

ಮೊಬೈಲ್, ಇಂಟರ್ ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. 2002 ರಲ್ಲಿ ಇಬ್ಬರು ಸಾಧ್ವಿಗಳ ಮೇಲೆ ಗುರ್ಮಿತ್ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಮುಗಿದು ಇಂದು ತೀರ್ಪು ಪ್ರಕಟವಾಗಲಿದೆ.

ಪಂಚಕುಲದಲ್ಲಿ ರೈಲು, ಬಸ್ ಸಾರಿಗೆ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಆದರೂ ಅಪಾರ ಸಂಖ್ಯೆಯ ಭಕ್ತರು ಪಂಚಕುಲಕ್ಕೆ ಆಗಮಿಸಿದ್ದಾರೆ. ಪಂಚಕುಲದ ರಸ್ತೆ, ಪಾರ್ಕ್, ಮೈದಾನಗಳಲ್ಲಿ ಗುರ್ಮಿತ್ ಸಿಂಗ್ ಅಪಾರ ಭಕ್ತರು ಬೀಡುಬಿಟ್ಟಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸರು, ಅರೆಸೇನಾ ಪಡೆಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...