alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಪತ್ರೆಯಲ್ಲೇ ಬೆತ್ತಲಾದ ಮಂಗಳಮುಖಿಯರು

miratಮೀರತ್: ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ರೋಗಿಯೊಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಮಂಗಳಮುಖಿಯರು ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಮೀರತ್ ನ ಆಸ್ಪತ್ರೆಯೊಂದರಲ್ಲಿ ಮಂಗಳಮುಖಿಯರ ಗುಂಪಿಗೆ ಸೇರಿದ ವ್ಯಕ್ತಿ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮಂಗಳಮುಖಿಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ ಮಂಗಳಮುಖಿಯರು, ಹಲವಾರು ಪರಿಕರಗಳಿಗೆ ಹಾನಿ ಮಾಡಿದ್ದಾರೆ. ಮಾತ್ರವಲ್ಲ, ಅಲ್ಲೇ ಬೆತ್ತಲಾಗಿ ಪ್ರತಿಭಟನೆ ನಡೆಸಿದ್ದಾರೆ.

ಆಸ್ಪತ್ರೆಯ ಸಿಬ್ಬಂದಿ ತಡೆಯುವ ಪ್ರಯತ್ನ ನಡೆಸಿದರೂ, ಮಂಗಳಮುಖಿಯರ ದಾಂಧಲೆ ಮುಂದುವರೆದಿದ್ದು, ವ್ಯಕ್ತಿಯ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಮಂಗಳಮುಖಿಯರು ಆಗ್ರಹಿಸಿದ್ದಾರೆ.

ಕೊನೆಗೆ ಸ್ಥಳೀಯ ಪೊಲೀಸರು ಆಸ್ಪತ್ರೆಗೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...