alex Certify
ಕನ್ನಡ ದುನಿಯಾ       Mobile App
       

Kannada Duniya

ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣೆಯಲ್ಲಿ ಕೇಂದ್ರದ ಮಹತ್ವದ ಹೆಜ್ಜೆ

ನವದೆಹಲಿ: ಮುಸ್ಲಿಂ ಮಹಿಳೆಯರ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಇಂದು ಲೋಕಸಭೆಯಲ್ಲಿ ಮಂಡಿಸಲಾದ ತ್ರಿವಳಿ ತಲಾಖ್ ಬಿಲ್ ಅಂಗೀಕಾರಗೊಂಡಿದೆ.

ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು, ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ ಮಸೂದೆ -2017 ಅನ್ನು ಮಂಡಿಸಿದ್ದು, ಇದರಡಿ ವಿಸ್ತೃತ ಚರ್ಚೆ ನಡೆಸಲಾಗಿದ್ದು, ಲೋಕಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.

ಅಸಾವುದ್ದೀನ್ ಓವೈಸಿ ವಿಧೇಯಕದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಅದನ್ನು ತಿದ್ದುಪಡಿ ಮಾಡುವಂತೆ ಒತ್ತಾಯಿಸಿದ್ದರು. ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಯಾವುದೇ ತಿದ್ದುಪಡಿ ಇಲ್ಲದೇ, ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ ಮಸೂದೆಗೆ ಅನುಮೋದನೆ ನೀಡಲಾಗಿದೆ. ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದ್ದು, ರಾಜ್ಯಸಭೆಯಲ್ಲಿ ಒಪ್ಪಿಗೆ ದೊರೆಯಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...