alex Certify
ಕನ್ನಡ ದುನಿಯಾ       Mobile App
       

Kannada Duniya

ನ್ಯಾಯ ಸಿಗದಿದ್ರೆ ಆತ್ಮಹತ್ಯೆಯೊಂದೇ ದಾರಿ ಎನ್ನುತ್ತಿದ್ದಾಳೆ ಮುಸ್ಲಿಂ ಮಹಿಳೆ

595789-tripletalaq-uttarakhand

ಉತ್ತರಾಖಂಡ್ ನಲ್ಲಿ ತ್ರಿವಳಿ ತಲಾಖ್ ನಿಂದ ನೊಂದ ಮಹಿಳೆಯೊಬ್ಬಳು ನ್ಯಾಯ ಸಿಗದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾಳೆ. ತನಗೆ ನ್ಯಾಯ ಕೊಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾಳೆ. ಇಲ್ಲದೇ ಹೋದಲ್ಲಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ತಿಳಿಸಿದ್ದಾಳೆ.

ಪತಿ ತ್ರಿವಳಿ ತಲಾಖ್ ನೀಡಿದ್ದು, ತನಗೆ ಬದುಕಿನಲ್ಲಿ ಆಸರೆಯೇ ಇಲ್ಲದಂತಾಗಿದೆ ಅಂತಾ ಅಳಲು ತೋಡಿಕೊಂಡಿದ್ದಾಳೆ. ಸದ್ಯ ತ್ರಿವಳಿ ತಲಾಖ್ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ನಿನ್ನೆಯಷ್ಟೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೆಹರ್ ನೇತೃತ್ವದ ಪೀಠ, ತ್ರಿವಳಿ ತಲಾಖ್ ಪ್ರಕರಣ ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.

6 ದಿನಗಳ ಕಾಲ ವಿಚಾರಣೆ ನಡೆದಿದ್ದು, ಜುಲೈನಲ್ಲಿ ತೀರ್ಪು ಹೊರಬೀಳುವ ನಿರೀಕ್ಷೆಯಿದೆ. ತ್ರಿವಳಿ ತಲಾಖ್ ಎಂಬ ಅನಿಷ್ಠ ಪದ್ಧತಿಯಿಂದ ನೊಂದಿರುವ ಹಲವು ಮುಸ್ಲಿಂ ಮಹಿಳೆಯರು ನ್ಯಾಯಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಈ ವ್ಯವಸ್ಥೆಯಿಂದ ಮುಕ್ತಿ ಕೊಡಿಸುವಂತೆ ಪ್ರಧಾನಿಗೆ ಮನವಿ ಮಾಡಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...