alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಕಲೆಕ್ಟರ್ ಜೊತೆ ಅಸಭ್ಯವಾಗಿ ವರ್ತಿಸಿದ ಶಾಸಕ ಅರೆಸ್ಟ್

mla

ತೆಲಂಗಾಣದ ಮಹಬೂಬಬಾದ್ ಜಿಲ್ಲೆಯ ಮಹಿಳಾ ಕಲೆಕ್ಟರ್ ಜೊತೆಗೆ ಅಸಭ್ಯವಾಗಿ ನಡೆದುಕೊಂಡ ಟಿ ಆರ್ ಎಸ್ ಶಾಸಕ ಶಂಕರ್ ನಾಯಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಅಲ್ಲಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟನೆಗೆ ಬಂದಿದ್ದ ಶಾಸಕರು ದುರ್ವರ್ತನೆ ತೋರಿದ್ದಾರೆ.

ಈ ಬಗ್ಗೆ ಮಹಿಳಾ ಕಲೆಕ್ಟರ್ ಪೊಲೀಸರಿಗೆ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 353, 354 ಮತ್ತು 509ರ ಅಡಿಯಲ್ಲಿ ಶಂಕರ್ ನಾಯಕ್ ವಿರುದ್ಧ ದೂರು ದಾಖಲಾಗಿದ್ದು, ಇವತ್ತು ಅವರನ್ನು ಬಂಧಿಸಲಾಗಿದೆ. ಶಾಸಕರ ವಿರುದ್ಧದ ಆರೋಪ ಸಾಬೀತಾದಲ್ಲಿ 2 ವರ್ಷ ಜೈಲು ಶಿಕ್ಷೆಯಾಗಬಹುದು.

ಶಾಸಕ ಉದ್ದೇಶಪೂರ್ವಕವಾಗಿಯೇ ಮಹಿಳಾ ಕಲೆಕ್ಟರ್ ಕೈಗಳನ್ನು ಸ್ಪರ್ಷಿಸಿರುವ ವಿಡಿಯೋವನ್ನು ಮಾಧ್ಯಮಗಳು ಕೂಡ ಪ್ರಸಾರ ಮಾಡಿವೆ. ಆದ್ರೆ ಆರೋಪ ನಿರಾಕರಿಸಿರುವ ಶಂಕರ್ ನಾಯಕ್, ತಾವು ಕಲೆಕ್ಟರ್ ಬಳಿ ಕ್ಷಮೆ ಕೇಳಿರುವುದಾಗಿ ಹೇಳಿಕೊಂಡಿದ್ದಾರೆ.

ಸ್ವತಃ ಸಿಎಂ ಚಂದ್ರಶೇಖರ್ ರಾವ್ ಕೂಡ ಶಾಸಕರ ಅಸಭ್ಯ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಕ್ಷಮೆ ಕೇಳುವಂತೆ ಸೂಚಿಸಿದ್ದಾರೆ. ಶಾಸಕರು ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳದೇ ಇದ್ದಲ್ಲಿ ಪಕ್ಷದಿಂದ ಉಚ್ಛಾಟನೆ ಮಾಡುವುದಾಗಿಯೂ ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...