alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದಿನಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘ ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು, ಇದರಿಂದ ದೇಶಾದ್ಯಂತ ಲಕ್ಷಾಂತರ ಲಾರಿಗಳ ಓಡಾಟ ಸ್ಥಗಿತಗೊಳ್ಳಲಿದೆ.

ಪೆಟ್ರೋಲ್ ಹಾಗೂ ಡೀಸೆಲ್ ದರ ನಿಯಂತ್ರಿಸಬೇಕು ಮತ್ತು ವಾಹನಗಳ ಥರ್ಡ್ ಪಾರ್ಟಿ ವಿಮೆ ಕಂತಿನ ದರ ಹೆಚ್ಚಳ ವಿರೋಧಿಸಿ ಮುಷ್ಕರ ನಡೆಸಲಾಗುತ್ತಿದ್ದು, ಇದರಿಂದಾಗಿ ಪೆಟ್ರೋಲ್-ಡೀಸೆಲ್ ಸರಬರಾಜು ಸೇರಿದಂತೆ ವಿವಿಧ ರೀತಿಯ ಸರಕುಗಳ ಸಾಗಣೆಯಲ್ಲಿ ವ್ಯತ್ಯಯವಾಗಲಿದೆ.

ತಮ್ಮ ಬೇಡಿಕೆಗಳ ಕುರಿತು ಸರಕು ಸಾಗಣೆ ವಾಹನ ಮಾಲೀಕರ ಸಂಘ, ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಆದರೆ ಸರ್ಕಾರದಿಂದ ಯಾವುದೇ ಭರವಸೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

ಹೀಗಾಗಿ ಅನಿರ್ದಿಷ್ಟ ಮುಷ್ಕರಕ್ಕೆ ಮುಂದಾಗಿದ್ದು, ಔಷಧಿ, ಹಾಲು, ತರಕಾರಿ ಸೇರಿ ದಿನಬಳಕೆ ವಸ್ತುಗಳ ಪೂರೈಕೆ ಲಾರಿಗಳನ್ನು ಹೊರತುಪಡಿಸಿ ಉಳಿದ ಸರಕು ಸಾಗಣೆ ವಾಹನಗಳು ರಸ್ತೆಗಿಳಿಯುವುದಿಲ್ಲವೆಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...