alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶುಭ ಸುದ್ದಿ

ttd-step-d

ತಿರುಪತಿ: ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಟಿ.ಟಿ.ಡಿ. ಸಿಹಿ ಸುದ್ದಿಯನ್ನು ನೀಡಿದೆ.

ವಾರಾಂತ್ಯದಲ್ಲಿ ದಿವ್ಯ ದರ್ಶನಕ್ಕೆ ಮತ್ತೆ ಅವಕಾಶ ಕಲ್ಪಿಸಿದೆ. ಕಾಲ್ನಡಿಗೆಯಲ್ಲಿ ಬರುವ ಭಕ್ತರಿಗಾಗಿ ನೀಡಲಾಗುತ್ತಿದ್ದ ದಿವ್ಯದರ್ಶನವನ್ನು ವಾರಾಂತ್ಯದಲ್ಲಿ ಸ್ಥಗಿತಗೊಳಿಸಲಾಗಿತ್ತು.

ಇದಕ್ಕೆ ಭಕ್ತರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ತನ್ನ ನಿರ್ಧಾರದಿಂದ ಹಿಂದೆ ಸರಿದಿರುವ ಟಿ.ಟಿ.ಡಿ. 14,000 -20,000 ಟೋಕನ್ ಗಳನ್ನು ನೀಡಲು ತೀರ್ಮಾನಿಸಿದೆ.

ಕಾಲ್ನಡಿಗೆಯಲ್ಲಿ ಸ್ವಾಮಿಯ ದರ್ಶನಕ್ಕೆ ತೆರಳುವ ಭಕ್ತರಿಗೆ ಇದರಿಂದ ಅನುಕೂಲವಾಗಲಿದೆ. ಕಾಲ್ನಡಿಗೆಯಲ್ಲಿ ಬರುವ ಭಕ್ತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾದ ಹಿನ್ನಲೆಯಲ್ಲಿ ಟಿ.ಟಿ.ಡಿ. ವಾರಾಂತ್ಯ ದಿವ್ಯ ದರ್ಶನ ನಿಲ್ಲಿಸಿತ್ತು.

ಆದರೆ, ಭಾರೀ ವಿರೋಧ ವ್ಯಕ್ತವಾದ ಕಾರಣ, ಮತ್ತೆ ಅವಕಾಶ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...