alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆಯಾಗೋ ಹಠ ಹಿಡಿದಿದ್ದಾರೆ ಇಬ್ಬರು ಸ್ನೇಹಿತೆಯರು

ಇಬ್ಬರು ಸ್ನೇಹಿತೆಯರ ಮಧ್ಯೆ ಪ್ರೀತಿ ಚಿಗುರಿದೆ. ಇಬ್ಬರೂ ಮೊದಲು ಓಡಿ ಹೋಗಿದ್ದಾರೆ. ಈಗ ಮದುವೆಯಾಗುವುದಾಗಿ ಪಟ್ಟುಹಿಡಿದು ಕುಳಿತಿದ್ದಾರೆ. ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಲಿಸಾಡಿ ಗೇಟ್ ಬಳಿ ಅಕ್ಕ-ಪಕ್ಕದ ಮನೆಯಲ್ಲಿ ಇವರಿಬ್ಬರು ವಾಸವಾಗಿದ್ದಾರೆ. ಇಬ್ಬರು ಒಟ್ಟಿಗೆ ಓದಿದ್ದಾರೆ. ಒಟ್ಟಿಗೆ ಬೆಳೆದಿದ್ದಾರೆ. ಇದೇ ಕಾರಣಕ್ಕೆ ಇಬ್ಬರೂ ಆಪ್ತರಾಗಿದ್ದರು. ಎರಡು ದಿನಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿದ್ದರು. ಬುಧವಾರ ರಾತ್ರಿ ಮನೆಗೆ ಬಂದ ಹುಡುಗಿಯರು ಮದುವೆಯಾಗುವುದಾಗಿ ಹಠ ಹಿಡಿದಿದ್ದಾರೆ.

ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಹುಡುಗಿಯರ ಕುಟುಂಬಸ್ಥರು ಕಿತ್ತಾಟ ಶುರು ಮಾಡಿದ್ದಾರೆ. ನಂತ್ರ ಸ್ಥಳಕ್ಕೆ ಬಂದ ಪೊಲೀಸರು ಹೇಗೋ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಹುಡುಗಿಯರು ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಕುಟುಂಬಸ್ಥರೇ ಹುಡುಗಿಯರನ್ನು ಪತ್ತೆ ಹಚ್ಚಿದ್ದರು ಎನ್ನಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...