alex Certify
ಕನ್ನಡ ದುನಿಯಾ       Mobile App
       

Kannada Duniya

‘ಉತ್ತರಪ್ರದೇಶದಲ್ಲಿ ಲೂಟಿಕೋರರು ಕೈಜೋಡಿಸಿದ್ದಾರೆ’: ಅಮಿತ್ ಶಾ

amit-shah

ಉತ್ತರಪ್ರದೇಶದಲ್ಲಿ ಅಖಿಲೇಶ್ ಯಾದವ್ ಹಾಗೂ ರಾಹುಲ್ ಗಾಂಧಿ ಅವರ ಚುನಾವಣಾ ಮೈತ್ರಿ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವ್ಯಂಗ್ಯವಾಡಿದ್ದಾರೆ. ಯುಪಿಯಲ್ಲಿ ಇಬ್ಬರು ರಾಜಕುಮಾರರು ಕೈಜೋಡಿಸಿದ್ದಾರೆ ಒಬ್ಬ ದೇಶವನ್ನು ಲೂಟಿ ಹೊಡೆದ್ರೆ, ಇನ್ನೋರ್ವ ರಾಜ್ಯವನ್ನು ಲೂಟಿ ಹೊಡೆದಿದ್ದಾರೆ ಅಂತಾ ಅಮಿತ್ ಶಾ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಅಂತಾ ಶಾ ಆರೋಪಿಸಿದ್ರು. ಯುಪಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಪ್ರಭಾವಿಗಳು ಹಾಗೂ ಶ್ರೀಮಂತರ ಪಾಲಾಗಿರುವ ಬಡವರ ಭೂಮಿಯನ್ನು ಕೇವಲ ಹದಿನೈದೇ ದಿನಗಳಲ್ಲಿ ವಾಪಸ್ ಕೊಡಿಸುವುದಾಗಿ ಭರವಸೆ ನೀಡಿದ್ರು.

ಕೊಲೆಗಳು ಇಲ್ಲಿ ಸರ್ವೇ ಸಾಮಾನ್ಯವಾಗಿಬಿಟ್ಟಿವೆ, ಉತ್ತರಪ್ರದೇಶ  ಅಪರಾಧಗಳ ರಾಜಧಾನಿಯಂತಾಗಿದೆ, ಜನರಲ್ಲಿ ಭಯ, ಆತಂಕದ ವಾತಾವರಣ ನಿರ್ಮಾಣವಾಗಿದೆ ಅಂತಾ ಹೇಳಿದ್ರು. ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆಗಾಗಿ ಬಿಜೆಪಿ ಹೋರಾಟ ಮಾಡಲಿದೆ ಅಂತಾ ಭರವಸೆ ನೀಡಿದ್ರು. ಇದೇ ವಿಚಾರವನ್ನಿಟ್ಟುಕೊಂಡು ಇವತ್ತು ಲೋಕಸಭೆಯಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ಕೂಡ ನಡೆಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...