alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಮದಡಿ ಸಿಲುಕಿ ಇಬ್ಬರು ಯೋಧರು ಹುತಾತ್ಮ

jk-hima

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಬಟಾಲಿಕ್ ಸೆಕ್ಟರ್ ನಲ್ಲಿ ಭಾರೀ ಹಿಮಕುಸಿತ ಉಂಟಾಗಿದ್ದು, ಇಬ್ಬರು ಯೋಧರು ಹುತಾತ್ಮರಾಗಿ ಮತ್ತೊಬ್ಬರು ನಾಪತ್ತೆಯಾಗಿದ್ದಾರೆ.

ಹಿಮದಡಿ ಸಿಲುಕಿರುವ ಯೋಧರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಕಳೆದೆರಡು ದಿನಗಳಿಂದ ಬಟಾಲಿಕ್ ಸೆಕ್ಟರ್ ನಲ್ಲಿ ಭಾರೀ ಹಿಮಪಾತವಾಗುತ್ತಿದೆ.

ಬೆಟ್ಟಕ್ಕೆ ಹೊಂದಿಕೊಂಡಿದ್ದ ಸೇನಾ ಶಿಬಿರದ ಮೇಲೆ ಹಿಮ ಕುಸಿದು ಇಬ್ಬರು ಮೃತಪಟ್ಟಿದ್ದು, ಒಬ್ಬರು ಸಿಲುಕಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕೆಲವೆಡೆ ಭಾರೀ ಮಳೆ ಹಾಗೂ ಹಿಮ ಕುಸಿತದಿಂದ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ನಿರಂತರವಾಗಿ ಹಿಮ ಕುಸಿತದಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...