alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದ ಸಲಹೆಗೆ ಒಪ್ಪದ ತಮಿಳುನಾಡು

umabharathiಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ನವದೆಹಲಿಯ ಶ್ರಮಶಕ್ತಿ ಭವನದಲ್ಲಿ ನಡೆದ ಇಂದಿನ ಸಭೆಯಲ್ಲಿ ಒಮ್ಮತಾಭಿಪ್ರಾಯಕ್ಕೆ ಬರಲು ವಿಫಲವಾಗಿದೆ.

ಜಲಾಶಯಗಳಲ್ಲಿರುವ ನೀರಿನ ಮಾಹಿತಿ ಪಡೆಯಲು ಕರ್ನಾಟಕ ಹಾಗೂ ತಮಿಳುನಾಡಿಗೆ ತಜ್ಞರ ತಂಡ ಕಳುಹಿಸಬೇಕೆಂಬ ಕರ್ನಾಟಕದ ಸಲಹೆಗೆ ತಮಿಳುನಾಡು ಒಪ್ಪಿಗೆ ನೀಡದಿರುವ ಕಾರಣ ಕಗ್ಗಂಟು ಹಾಗೆಯೇ ಮುಂದುವರೆದಿದೆ.

ಸಭೆ ಬಳಿಕ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸಚಿವೆ ಉಮಾಭಾರತಿ, ಸುಪ್ರೀಂ ಕೋರ್ಟ್ ಸೂಚನೆಯಂತೆ ಇಂದಿನ ಸಭೆ ನಡೆಸಲಾಗಿದೆ. ಕರ್ನಾಟಕದ ಪ್ರಸ್ತಾವನೆಗೆ ತಮಿಳುನಾಡು ಒಪ್ಪಿಗೆ ನೀಡಿಲ್ಲ. ಸಂಧಾನದ ಮೂಲಕ ವಿವಾದ ಬಗೆಹರಿಸುವ ವಿಶ್ವಾಸವಿದೆ ಎಂದಿದ್ದಾರೆ.

ಇಂದಿನ ಸಭೆಯ ವಿವರವನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟ್ ಯಾವುದೇ ಆದೇಶ ನೀಡಿದರೂ ಉಭಯ ರಾಜ್ಯಗಳು ಅದನ್ನು ಗೌರವಿಸಬೇಕಾಗುತ್ತದೆ. ಹಾಗೆಯೇ ಕರ್ನಾಟಕ ಹಾಗೂ ತಮಿಳುನಾಡಿನ ಜನತೆ ಶಾಂತಿ- ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಉಮಾಭಾರತಿ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...