alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಬಜೆಟ್ ಮಂಡನೆ ಆರಂಭ

India's Finance Minister Arun Jaitley (C) arrives at the parliament where he is due to present the federal budget, in New Delhi, India, February 1, 2017. REUTERS/Adnan Abidi

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸಂಸತ್ ನಲ್ಲಿ 2017-18 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಬಜೆಟ್ ಮಂಡನೆಯನ್ನು ಮುಂದೂಡಬೇಕೆಂದು ಒತ್ತಾಯಿಸಿದ್ರು. ಸಂಸದ ಇ-ಅಹಮದ್ ನಿಧನದ ಹಿನ್ನೆಲೆಯಲ್ಲಿ ಬಜೆಟ್ ಅನ್ನು ಮುಂದೂಡುವಂತೆ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ರು.

ಕಾಂಗ್ರೆಸ್ ನ ಇತರ ಸದಸ್ಯರು ಕೂಡ ಗದ್ದಲ ಎಬ್ಬಿಸಿದ್ರು. ಆದ್ರೆ ವಿಪಕ್ಷಗಳ ಒತ್ತಾಯಕ್ಕೆ ಮಣಿಯದ ಸ್ಪೀಕರ್ ಸುಮಿತ್ರಾ ಮಹಾಜನ್ ಬಜೆಟ್ ಮಂಡನೆಗೆ ಅವಕಾಶ ಕಲ್ಪಿಸಿದರು. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೆಬ್ರವರಿ 1ರಂದು ಬಜೆಟ್ ಮಂಡಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಸಾಮಾನ್ಯ ಬಜೆಟ್ ನಲ್ಲಿ ರೈಲ್ವೆ ಮುಂಗಡಪತ್ರವನ್ನು ವಿಲೀನ ಮಾಡಲಾಗಿದೆ.

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಎರಡಂಕಿ ಹಣದುಬ್ಬರ ನಿಯಂತ್ರಣ ಮಾಡಿರುವುದಾಗಿ ಜೇಟ್ಲಿ ಹೇಳಿದ್ದಾರೆ. ಸಾರ್ವಜನಿಕ ಹಣ ಸದುಪಯೋಗಕ್ಕೆ ಕ್ರಮ, ಉದ್ಯೋಗ ಕ್ಷೇತ್ರದಲ್ಲಿ ಯುವಶಕ್ತಿ ಬಲವರ್ಧನೆ ಹೀಗೆ ಹತ್ತಾರು ಅಭಿವೃದ್ಧಿ ಕ್ರಮಗಳನ್ನು ಎನ್ ಡಿ ಎ ಸರ್ಕಾರ ಕೈಗೊಂಡಿರೋದಾಗಿ ತಿಳಿಸಿದ್ದಾರೆ. ವಿಶ್ವದಲ್ಲಿ ಭಾರತ ಆರ್ಥಿಕವಾಗಿ ಮುಂದುವರಿಯುತ್ತಿದೆ ಎಂದ ಜೇಟ್ಲಿ, ಸರ್ಕಾರದ ನೋಟು ನಿಷೇಧ ನಿರ್ಧಾರವನ್ನು ಸಮರ್ಥಿಸಿಕೊಂಡ್ರು. ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ಕಪ್ಪುಹಣ ತಡೆಯಲು ಸರ್ಕಾರ ಕೈಗೊಂಡ ದಿಟ್ಟ ಕ್ರಮ ಇದು ಅಂತಾ ಹೇಳಿದ್ರು. ಆರ್ಥಿಕ ಅಭಿವೃದ್ಧಿಗೆ ಅಮಾನ್ಯೀಕರಣ ಪೂರಕ ಅಂತಾ ಅಭಿಪ್ರಾಯಪಟ್ರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...