alex Certify
ಕನ್ನಡ ದುನಿಯಾ       Mobile App
       

Kannada Duniya

10 ಕೋಟಿ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂ. ಆರೋಗ್ಯ ವಿಮೆ

ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಬಡವರಿಗೆ ಭರ್ಜರಿ ಉಡುಗೊರೆ ನೀಡಿದೆ. ರಾಷ್ಟ್ರೀಯ ಆರೋಗ್ಯ ಸಂರಕ್ಷಣಾ ಯೋಜನೆಯಡಿ 10 ಕೋಟಿ ಬಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಆರೋಗ್ಯ ವಿಮೆ ನೀಡುವುದಾಗಿ ಅರುಣ್ ಜೇಟ್ಲಿ ಹೇಳಿದ್ದಾರೆ. ಇದು ವಿಶ್ವದ ಅತಿ ದೊಡ್ಡ ಆರೋಗ್ಯ ರಕ್ಷಣಾ ಕಾರ್ಯಕ್ರಮವೆಂದು ಜೇಟ್ಲಿ ಹೇಳಿದ್ದಾರೆ.

ಈ ಯೋಜನೆಯಡಿ ಸುಮಾರು 50 ಕೋಟಿಗೂ ಹೆಚ್ಚು ಜನರಿಗೆ ಲಾಭವಾಗಲಿದೆ. ಈ ಯೋಜನೆಯಡಿ ಬಡ ಕುಟುಂಬಗಳಿಗೆ ಆರೋಗ್ಯಕ್ಕಾಗಿ ಐದು ಲಕ್ಷ ರೂಪಾಯಿ ಹಣವನ್ನು ಸರ್ಕಾರ ನೀಡಲಿದೆ. ಸರ್ಕಾರ 24 ಹೊಸ ಮೆಡಿಕಲ್ ಕಾಲೇಜುಗಳನ್ನು ಸ್ಥಾಪನೆ ಮಾಡಲಿದೆ. ಜಿಲ್ಲಾ ಆಸ್ಪತ್ರೆಗಳು ಕೂಡ ಮೇಲ್ದರ್ಜೆಗೆ ಏರಲಿವೆ.

ಈಗಾಗಲೇ ಉಜ್ಜಲಾ ಯೋಜನೆಯಡಿ 5 ದಶಲಕ್ಷ ಬಡ ಮಹಿಳೆಯರಿಗೆ ಅಡುಗೆ ಅನಿಲ ನೀಡಲಾಗಿದೆ. ಈಗ ಸರ್ಕಾರದ ಗಮನ 8 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ ನೀಡುವ ಗುರಿ ಕಡೆಗೆ ಇದೆ ಎಂದು ಜೇಟ್ಲಿ ಹೇಳಿದ್ದಾರೆ.

ರಾಷ್ಟ್ರಪತಿಗಳು,ಉಪರಾಷ್ಟ್ರಪತಿ, ಗವರ್ನರ್ ಹಾಗೂ ಸಂಸದರ ವೇತನವನ್ನು ಸರ್ಕಾರ ಹೆಚ್ಚಳ ಮಾಡಿದೆ. ರಾಷ್ಟ್ರಪತಿಗಳ ತಿಂಗಳ ಸಂಬಳ 5 ಲಕ್ಷಕ್ಕೇರಿದೆ. ಉಪರಾಷ್ಟ್ರಪತಿಗಳಿಗೆ 4 ಲಕ್ಷ ಸಂಬಳ ಸಿಗಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...