alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವರ ಬೆಂಗಾವಲು ಪಡೆ ಮೇಲೆ ದಾಳಿ

babul-supr

ದುರ್ಗಾಪುರ: ಕೇಂದ್ರ ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಖಾತೆ ರಾಜ್ಯ ಸಚಿವ ಬಾಬುಲ್ ಸುಪ್ರಿಯೋ ಅವರ ಬೆಂಗಾವಲು ಪಡೆ ಮೇಲೆ, ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಪಶ್ಚಿಮ ಬಂಗಾಳದ ದುರ್ಗಾಪುರದ ಕಲ್ಲಿದ್ದಲು ವಿದ್ಯುತ್ ಉತ್ಪಾದನಾ ಸ್ಥಾವರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಹೆಚ್ಚಿನ ಸಂಖ್ಯೆಯಲ್ಲಿದ್ದ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು, ಸಚಿವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದು, ಕಲ್ಲು ತೂರಾಟ ನಡೆಸಿದ್ದಾರೆ.

ಆದರೆ ಸಚಿವರು ಪಾರಾಗಿದ್ದು, ಬೆಂಗಾವಲು ಪಡೆ ವಾಹನಕ್ಕೆ ಮತ್ತು ಸಿಬ್ಬಂದಿಗೆ ಹಾನಿಯಾಗಿದೆ.

ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೆ ತಿಳಿಸಿದರೂ ಸ್ಪಂದಿಸಲಿಲ್ಲ ಎಂದು ಬಾಬುಲ್ ಸುಪ್ರಿಯೋ ದೂರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...