alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸಚಿವರಿಗೆ ಈ ಸೂಚನೆ ನೀಡಿದ್ದಾರೆ ಪ್ರಧಾನಿ ಮೋದಿ

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಆಯುಷ್ಮಾನ್ ಭಾರತ ಯೋಜನೆ ಉದ್ಘಾಟನೆಗೆ ಎಲ್ಲ‌ ಕೇಂದ್ರ ಕ್ಯಾಬಿನೆಟ್ ಸಚಿವರು ತಂತಮ್ಮ ರಾಜ್ಯಗಳಿಗೆ ತೆರಳುವಂತೆ ಪ್ರಧಾನಿ‌ ನರೇಂದ್ರ ಮೋದಿ ಅವರು ಸೂಚನೆ ನೀಡಿದ್ದಾರೆ.

ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ‌. ನಡ್ಡಾ ಸೇರಿದಂತೆ ಹಲವು‌ ನಾಯಕರೊಂದಿಗೆ ರಾಂಚಿಯಲ್ಲಿ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ( ಆಯುಷ್ಮಾನ್ ಭಾರತ) ಚಾಲನೆ ನೀಡಲಿದ್ದಾರೆ.

ಇದೇ ವೇಳೆ ಎನ್.ಡಿ.ಎ. ನೇತೃತ್ವದ ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ಸಂಬಂಧಿಸಿದ ರಾಜ್ಯಗಳಲ್ಲಿ ಕಾರ್ಯಕ್ರಮ ಒಂದೇ ಸಮಯದಲ್ಲಿ ನಡೆಯಲಿದ್ದು, ಈ ವೇಳೆ ಕ್ಷೇತ್ರ ಅಥವಾ ರಾಜ್ಯಗಳಿಗೆ‌ ಕೇಂದ್ರ ಸಚಿವರು ತೆರಳಿ ಯೋಜನೆಯ‌ ಬಗ್ಗೆ ಜನರಿಗೆ‌ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಗೋರಖ್ ಪುರದಲ್ಲಿ, ಬಿಹಾರದ ಪಾಟ್ನಾದಲ್ಲಿ ನಿತೀಶ್ ಕುಮಾರ್, ಲಕ್ನೋದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯಲ್ಲಿ‌ ಉತ್ತರ ಪ್ರದೇಶದ 1.18 ಕೋಟಿ ಹಾಗೂ ಬಿಹಾರದ 1.09 ಕೋಟಿ ಕುಟುಂಬಗಳು ಸೇರಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...