alex Certify
ಕನ್ನಡ ದುನಿಯಾ       Mobile App
       

Kannada Duniya

ನದಿಗೆ ಬಸ್ ಬಿದ್ದು 8 ಮಂದಿ ಸಾವು

bus-up-d

ವಾರಣಾಸಿ: ಉತ್ತರ ಪ್ರದೇಶದ ಜೌನ್ ಪುರ್ –ಅಲಹಾಬಾದ್ ಹೆದ್ದಾರಿಯ ಬಾರ್ಗುದಾರ್ ಬಳಿ ಸೇತುವೆಯಿಂದ ನದಿಗೆ ಬಸ್ ಬಿದ್ದು 8 ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಬಸ್ ನಲ್ಲಿದ್ದ 30 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.

ಉತ್ತರ ಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಅಲಹಾಬಾದ್ ನಿಂದ ಹೊರಟಿದ್ದು, ಸಾಯಿ ರಿವರ್ ಸೇತುವೆ ಮೇಲೆ ಹಾದು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದ್ದು, ಸೇತುವೆಯಿಂದ ಕೆಳಕ್ಕೆ ಬಿದ್ದಿದೆ.

ಅಪಘಾತದಲ್ಲಿ ಸ್ಥಳದಲ್ಲೇ ಹಲವರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿ ಸಿಲುಕಿದ್ದವರನ್ನು ಸ್ಥಳೀಯರು, ಪೊಲೀಸರು ರಕ್ಷಿಸಿದ್ದಾರೆ. ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...