alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ವೈದ್ಯರು ಸಾವು

ನವದೆಹಲಿ: ಉತ್ತರ ಪ್ರದೇಶದ ಮಥುರಾ ಬಳಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ನಡೆದ ಭೀಕರ ಅಪಘಾತದಲ್ಲಿ ಏಮ್ಸ್ ನ ಮೂವರು ವೈದ್ಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಡಾ. ಯಶಪಾಲ್, ಡಾ. ಹರ್ಷದ್, ಡಾ. ಹೇಮಬಾಲಾ ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರು ಚಾಲಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೋವಾದಲ್ಲಿ ದೆಹಲಿಯಿಂದ ಆಗ್ರಾಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅತಿವೇಗವಾಗಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರನ್ನು ಪಾರು ಮಾಡಲು ಹರಸಾಹಸ ನಡೆಸಲಾಗಿದೆ. ಹೈವೇ ರಕ್ಷಣಾದಳದ ಸಿಬ್ಬಂದಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...