alex Certify
ಕನ್ನಡ ದುನಿಯಾ       Mobile App
       

Kannada Duniya

ಆ.15ರಂದು ಎಲ್ಲ ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ

273180-madarsa14-compressed-580x395

ಉತ್ತರ ಪ್ರದೇಶದಲ್ಲಿ ಆಗಸ್ಟ್ 15ರಂದು ಅಂದ್ರೆ ಸ್ವಾತಂತ್ರ್ಯ ದಿನದಂದು ಎಲ್ಲ ಮದರಸಾಗಳಲ್ಲಿಯೂ ರಾಷ್ಟ್ರಗೀತೆ ಹಾಡುವುದು ಹಾಗೂ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ. ಮದರಸಾ ಶಿಕ್ಷಾ ಪರಿಷತ್ ಶುಕ್ರವಾರ ಈ ಆದೇಶ ನೀಡಿದೆ.

ಮದರಸಾ ಶಿಕ್ಷಾ ಪರಿಷತ್, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿಗಳಿಗೆ ಪತ್ರ ಬರೆದಿದೆ. ರಾಜ್ಯದ ಎಲ್ಲ ಮದರಸಾಗಳಲ್ಲಿ ಸ್ವಾತಂತ್ರ್ಯ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡುವ ಜೊತೆಗೆ ವಿಡಿಯೋ ಹಾಗೂ ಫೋಟೋ ತೆಗೆಯುವಂತೆ ಆದೇಶ ನೀಡಲಾಗಿದೆ.

ನಿಮ್ಮ ಕ್ಷೇತ್ರದಲ್ಲಿರುವ ಎಲ್ಲ ಮದರಸಾಗಳಲ್ಲಿ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಮಾಡುವ ಜೊತೆಗೆ ರಾಷ್ಟ್ರಗೀತೆ ಹಾಡುವಂತೆ ಸೂಚನೆ ನೀಡಿ. ಹಾಗೆ ಕಾರ್ಯಕ್ರಮದ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿಯನ್ನು ತಪ್ಪದೆ ಶಿಕ್ಷಾ ಪರಿಷತ್ ಗೆ ಕಳುಹಿಸಿಕೊಡಿ ಎಂದು ಅಲ್ಪ ಸಂಖ್ಯಾತ ಕಲ್ಯಾಣ ಅಧಿಕಾರಿಗಳಿಗೆ ಮದರಸಾ ಶಿಕ್ಷಾ ಪರಿಷತ್  ಪತ್ರದಲ್ಲಿ ಸೂಚಿಸಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...