alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ನಡೆದಿದೆ ಅಮಾನವೀಯ ಘಟನೆ

ಲಖ್ನೋ: ಆಂಬುಲೆನ್ಸ್ ಸಿಗದೇ ಪತ್ನಿಯ ಶವವನ್ನು ಹೆಗಲಮೇಲೆ ಹೊತ್ತುಕೊಂಡು ಹೋಗಿದ್ದ ಮಾಂಝಿ ಪ್ರಕರಣ ವಿಶ್ವದಲ್ಲೇ ಸಂಚಲನ ಮೂಡಿಸಿತ್ತು. ಅಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗಿದ್ದರೂ, ಪ್ರಯೋಜನವಾಗಿಲ್ಲ. ಮತ್ತೆ ಮತ್ತೆ ಅಂತಹುದೇ ಅಮಾನವೀಯ ಘಟನೆ ನಡೆದಿವೆ.

ಉತ್ತರ ಪ್ರದೇಶದ ಬದಾಯೂ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಮೃತದೇಹವನ್ನು ಹೆಗಲ ಮೇಲೆ ಹೊತ್ತೊಯ್ದ ಘಟನೆ ವರದಿಯಾಗಿದೆ. ಮೃತದೇಹ ಸಾಗಿಸಲು ಆಂಬುಲೆನ್ಸ್ ನೀಡಲು ನಿರಾಕರಿಸಿದ ಕಾರಣ, ಮಹಜರ ಗ್ರಾಮದ ವ್ಯಕ್ತಿ ಪತ್ನಿಯ ಮೃತದೇಹವನ್ನು ಹೆಗಲ ಮೇಲೆ ಹೊತ್ತು, 4 ಕಿಲೋ ಮೀಟರ್ ದೂರದಲ್ಲಿರುವ ತನ್ನ ಗ್ರಾಮಕ್ಕೆ ಹೋಗಿದ್ದಾರೆ.

ಅನಾರೋಗ್ಯದ ಕಾರಣ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಕೆಲ ಹೊತ್ತಿನಲ್ಲೇ ಮೃತಪಟ್ಟಿದ್ದಾರೆ. ಪತ್ನಿಯ ಮೃತದೇಹ ಸಾಗಿಸಲು ಆಂಬುಲೆನ್ಸ್ ಗೆ ಮನವಿ ಮಾಡಿದ್ರೂ ವ್ಯಕ್ತಿಗೆ ಯಾರೂ ಸ್ಪಂದಿಸಿಲ್ಲ. ಕೈಯಲ್ಲಿ ಹಣ ಕೂಡ ಇಲ್ಲದೇ ಕಂಗಾಲಾಗಿದ್ದ ವ್ಯಕ್ತಿ ಹೆಗಲ ಮೇಲೆ ಪತ್ನಿಯ ಮೃತದೇಹವನ್ನು ಹೊತ್ತು ಗ್ರಾಮಕ್ಕೆ ತೆರಳಿದ್ದಾರೆ. ಈ ಪ್ರಕರಣ ಬೆಳಕಿಗೆ ಬರುತ್ತಲೇ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...