alex Certify
ಕನ್ನಡ ದುನಿಯಾ       Mobile App
       

Kannada Duniya

ವಾಟ್ಸಾಪ್ ನಲ್ಲಿ ರಾಜೀನಾಮೆ ರವಾನಿಸಿದ ಪೊಲೀಸ್ ಅಧಿಕಾರಿ

ಎರಡು ದಿನಗಳ ಹಿಂದಷ್ಟೇ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳದ ಸಹಾಯಕ ರಕ್ಷಣಾಧಿಕಾರಿ ರಾಜೇಶ್ ಸಾಹ್ನಿ ಲಕ್ನೋದ ತಮ್ಮ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಳಿಕ ನಡೆದಿರುವ ಮತ್ತೊಂದು ಘಟನೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮುಜುಗರಕ್ಕೀಡು ಮಾಡಿದೆ.

ಭಯೋತ್ಪಾದನಾ ನಿಗ್ರಹ ದಳದಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯತೀಂದ್ರ ಶರ್ಮಾ, ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಮ್ಮ ರಾಜೀನಾಮೆ ರವಾನಿಸಿದ್ದಾರಲ್ಲದೆ ಭಯೋತ್ಪಾದನಾ ನಿಗ್ರಹ ದಳದ ಐಜಿ ಅರುಣ್, ತಮ್ಮ ಕೈಕೆಳಗಿನ ಅಧಿಕಾರಿಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಯತೀಂದ್ರ ಶರ್ಮಾ ಅವರ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮುಜುಗರಕ್ಕೆ ಒಳಗಾಗಿದ್ದಾರೆ. ಹೀಗಾಗಿ ಕೂಡಲೇ ಯತೀಂದ್ರ ಶರ್ಮಾರನ್ನು ಕಚೇರಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಇದಾದ ಬಳಿಕ ಇನ್ಸ್ಪೆಕ್ಟರ್ ಶರ್ಮ ತಾವು ರಾಜೇಶ್ ಅವರ ಅಕಾಲಿಕ ನಿಧನದಿಂದ ಭಾವುಕರಾಗಿ ಈ ಪೋಸ್ಟ್ ಮಾಡಿದ್ದಾಗಿ ತಿಳಿಸಿದ್ದಾರೆ. ಆದರೆ ಉತ್ತರ ಪ್ರದೇಶ ಪೊಲೀಸ್ ಇಲಾಖೆ ಈ ಘಟನೆಯಿಂದಾಗಿ ತಲೆತಗ್ಗಿಸುವಂತಾಗಿದ್ದರಲ್ಲಿ ಸಂಶಯವಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...