alex Certify
ಕನ್ನಡ ದುನಿಯಾ       Mobile App
       

Kannada Duniya

ಗುಂಡೇಟಿಗೆ ಬಲಿಯಾದ ಮೊಹಮ್ಮದ್ ಶಮಿ

sami

ಅಲಹಾಬಾದ್: ಉತ್ತರ ಪ್ರದೇಶದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಬಿ.ಎಸ್.ಪಿ. ನಾಯಕ ಮೊಹಮ್ಮದ್ ಶಮಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಅಲಹಾಬಾದ್ ಸಮೀಪದ ಶಮಿ ಅವರಿಗೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ಎದುರಾಗಿದ್ದು, ಫೈರಿಂಗ್ ಮಾಡಿದ್ದಾರೆ. ಇದರಿಂದಾಗಿ ಶಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯ ಬಳಿಕ ಉದ್ವಿಗ್ನ ಸ್ಥಿತಿ ಉಂಟಾಗಿ ಅಲಹಾಬಾದ್, ಫೈಜಾಬಾದ್ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿ ತಿಳಿಗೊಳಿಸಲಾಗಿದೆ.

ದುಷ್ಕರ್ಮಿಗಳ ಪತ್ತೆಗೆ ತನಿಖಾ ತಂಡ ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪರಾಭವಕ್ಕೆ ಕೊಹ್ಲಿ ತಪ್ಪು ನಿರ್ಧಾರ ಕಾರಣವೇ..?

    View Results

    Loading ... Loading ...