alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಯೋಗಿ ಕೈಗೆ ಬಂತು ಪೊರಕೆ

cm_yogi_760_1494038114_749x421

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಿಷನ್ ಕ್ಲೀನಿಂಗ್ ಶುರುಮಾಡಿದ್ದಾರೆ. ಸ್ವಚ್ಛತೆಗೆ ಹೆಚ್ಚು ಒತ್ತು ನೀಡಿರುವ ಯೋಗಿ ಕೈಗೆ ಈಗ ಪೊರಕೆ ಬಂದಿದೆ. ಶನಿವಾರ ಬೆಳ್ಳಂಬೆಳಿಗ್ಗೆ ಪೊರಕೆ ಹಿಡಿದು ಲಕ್ನೋ ರಸ್ತೆಗಿಳಿದಿದ್ದರು ಯೋಗಿ.

ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವುದು ಯೋಗಿ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಹಾಗೆ ನೈರ್ಮಲ್ಯದ ವಿಚಾರದಲ್ಲಿ ಉನ್ನತ ಮಟ್ಟಕ್ಕೇರುವುದು ಅವರ ಗುರಿಯಾಗಿದೆ. ಶನಿವಾರ ಲಕ್ನೋ ರಸ್ತೆಯನ್ನು ಸ್ವಚ್ಛಗೊಳಿಸಿದ ಯೋಗಿ ಸಾರ್ವಜನಿಕ ಶೌಚಾಲಯವನ್ನು ಸ್ವಚ್ಛಗೊಳಿಸುವ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ರು.

ಇತ್ತೀಚೆಗೆ ಬಿಡುಗಡೆಯಾದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಉತ್ತರ ಪ್ರದೇಶದ ವಾರಾಣಸಿ ಬಿಟ್ಟರೆ ಮತ್ಯಾವ ನಗರದ ಹೆಸರೂ ಸ್ಥಾನ ಪಡೆದಿಲ್ಲ. ಈ ಬಗ್ಗೆ ಮಾಧ್ಯಮವೊಂದರ ಜೊತೆ ಮಾತನಾಡಿದ್ದ ಯೋಗಿ, ಸ್ವಚ್ಛ ಭಾರತ ಅಭಿಯಾನದಡಿ ರಾಜ್ಯದಲ್ಲಿ ಸಾಕಷ್ಟು ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ಸ್ವತಃ ನಾನೇ ಸ್ವಚ್ಛತೆಗೆ ಧುಮುಕುತ್ತೇನೆ. ಬಯಲು ಶೌಚಾಲಯ ಮುಕ್ತ ರಾಜ್ಯ ನಮ್ಮ ಗುರಿ ಎಂದು ಯೋಗಿ ಹೇಳಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...