alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲು ಅಪಘಾತದಲ್ಲಿ 12 ಮಂದಿಗೆ ಗಾಯ

rail-dd

ಲಖ್ನೋ: ಉತ್ತರ ಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದೆ. ಜಬಲ್ಪುರ್ –ನಿಜಾಮುದ್ದೀನ್ ನಡುವೆ ಸಂಚರಿಸುವ ಮಹಾಕೌಶಲ್ ಎಕ್ಸ್ ಪ್ರೆಸ್ ಹಳಿತಪ್ಪಿದೆ.

ಮೆಹೋಬಾ –ಕುಲ್ ಪಹಾರ್ ನಡುವೆ ರೈಲಿನ 8 ಬೋಗಿಗಳು ಹಳಿ ತಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. 4 ಎ.ಸಿ. ಹಾಗೂ 4 ಜನರಲ್ ಬೋಗಿಗಳು ಹಳಿ ತಪ್ಪಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದು, ಅವರಲ್ಲಿ 6 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ರೈಲ್ವೇ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...