alex Certify
ಕನ್ನಡ ದುನಿಯಾ       Mobile App
       

Kannada Duniya

ವಿಚಿತ್ರ…! ತನ್ನ ವಿರುದ್ಧವೇ ದೂರು ದಾಖಲಿಸಿಕೊಂಡಿದ್ದಾನೆ ಪೊಲೀಸ್ ಅಧಿಕಾರಿ

ಉತ್ತರ ಪ್ರದೇಶದಲ್ಲೊಂದು ವಿಚಿತ್ರ ಪ್ರಕರಣ ನಡೆದಿದೆ. ಠಾಣಾಧಿಕಾರಿಯೊಬ್ಬರು ತಾವೂ ಸೇರಿದಂತೆ ಠಾಣೆಯ ಕೆಲ ಪೊಲೀಸರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಮೀರತ್ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಜೇಂದ್ರ ತ್ಯಾಗಿ ಈ ರೀತಿ ಪ್ರಕರಣ ದಾಖಲಿಸಿಕೊಂಡಿದ್ದು, ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗೋ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟಲು ವಿಫಲವಾಗಿದ್ದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜೇಂದ್ರ ತ್ಯಾಗಿ, ಯಾವುದೇ ಪ್ರದೇಶದಲ್ಲಿ ಅಪರಾಧ ಸಂಭವಿಸಿದರೆ ಅಲ್ಲಿ ಕಾರ್ಯ ನಿರ್ವಹಿಸುವ ಪೊಲೀಸ್ ಪೇದೆಯನ್ನು ಹೊಣೆಗಾರರನ್ನಾಗಿ ಮಾಡುತ್ತೇವೆ. ಅದೇ ರೀತಿ ನಾನು ಮತ್ತು ನನ್ನ ಕೆಲ ಸಿಬ್ಬಂದಿ ನಮ್ಮ ಠಾಣಾ ವ್ಯಾಪ್ತಿಯಲ್ಲಿ ಗೋ ಕಳ್ಳ ಸಾಗಾಣಿಕೆ ತಡೆಗಟ್ಟಲು ವಿಫಲರಾದ ಕಾರಣ ದೂರು ದಾಖಲಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...