alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರಪ್ರದೇಶದಲ್ಲಿಂದು ದಿಗ್ಗಜರ ಪ್ರಚಾರ ಭರಾಟೆ

up-3-580x395

ಗೋವಾ ಮತ್ತು ಪಂಜಾಬ್ ನಲ್ಲಿ ನಿನ್ನೆಯಷ್ಟೆ ಮತದಾನ ಮುಗಿದಿದೆ. ಈಗ ಎಲ್ಲರ ಚಿತ್ತ ಉತ್ತರಪ್ರದೇಶದತ್ತ. ಇಂದು ಭಾನುವಾರ ರಜಾದಿನವಾಗಿದ್ರೂ ಉತ್ತರಪ್ರದೇಶದಲ್ಲಿ ಮಾತ್ರ ಚುನಾವಣಾ ಭರಾಟೆ ಕಾವೇರಿದೆ. ಇವತ್ತು ರಾಜ್ಯದಲ್ಲಿ ದಿಗ್ಗಜರ ಬೃಹತ್ ಚುನಾವಣಾ ಪ್ರಚಾರ ರ್ಯಾಲಿಗಳು ನಡೆಯಲಿವೆ.

ಫೆಬ್ರವರಿ 11ರಂದು ಮೊದಲ ಹಂತದಲ್ಲಿ 73 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮತದಾರರ ಮನಗೆಲ್ಲಲು ಎಲ್ಲಾ ಪಕ್ಷಗಳು ಕಸರತ್ತು ಮಾಡುತ್ತಿವೆ. ಅಲಿಗಢದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಜನಸಭೆಯನ್ನುದ್ದೇಶಿಸಿ ಚುನಾವಣಾ ಭಾಷಣ ಮಾಡಲಿದ್ದಾರೆ.

ಇತ್ತ ಕಾನ್ಪುರದಲ್ಲಿ ಸಿಎಂ ಅಖಿಲೇಶ್ ಯಾದವ್ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಜೊತೆಯಾಗಿ ರೋಡ್ ಶೋ ಹಮ್ಮಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಮೂರು ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ಬಿಎಸ್ಪಿ ನಾಯಕಿ ಮಾಯಾವತಿ ಇವತ್ತು ಉತ್ತರಾಖಂಡ್ ಮೇಲೆ ಕಣ್ಣಿಟ್ಟಿದ್ದಾರೆ. ಸಿತಾರ್ ಗಂಜ್ ನಲ್ಲಿ ಮಾಯಾವತಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...