alex Certify
ಕನ್ನಡ ದುನಿಯಾ       Mobile App
       

Kannada Duniya

ಯುಪಿ, ಉತ್ತರಾಖಂಡ್ ನಲ್ಲಿ ಮತದಾನ ಆರಂಭ

vote

ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಉತ್ತರಪ್ರದೇಶದಲ್ಲಿ ಎರಡನೇ ಹಂತದ ಮತದಾನ ಆರಂಭವಾಗಿದ್ದು, 67 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇತ್ತ ಉತ್ತರಾಖಂಡ್ ನ 69 ವಿಧಾನಸಭಾ ಕ್ಷೇತ್ರಗಳಲ್ಲೂ ಬೆಳಗ್ಗೆಯಿಂದ್ಲೇ ಮತದಾನ ಆರಂಭವಾಗಿದೆ.

2012 ರಲ್ಲಿ ನಡೆದ ಚುನಾವಣೆಯಲ್ಲಿ ಈ 67 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ 34 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸ್ತಾ ಇದೆ. ಬಿಎಸ್ಪಿ 18, ಬಿಜೆಪಿ 10 ಮತ್ತು ಕಾಂಗ್ರೆಸ್ 3 ಸ್ಥಾನ ಗೆದ್ದಿದ್ದವು. ಈ ಹಂತದಲ್ಲಿ ಒಟ್ಟು 720 ಅಭ್ಯರ್ಥಿಗಳು ಕಣದಲ್ಲಿದ್ದು 2.28 ಕೋಟಿ ಜನರು ಹಕ್ಕು ಚಲಾಯಿಸಲಿದ್ದಾರೆ.

23,693 ಮತಗಟ್ಟೆಗಳನ್ನು ತೆರೆಯಲಾಗಿದೆ. ಸಹರನ್ಪುರ್, ಬಿಜನೋರ್, ಮೊರಾದಾಬಾದ್, ಸಂಭಲ್, ರಾಂಪುರ, ಬರೇಲಿ, ಅಮ್ರೋಹಾ, ಪಿಲಿಭಿಟ್, ಖೇರಿ, ಷಹಜಹಾನ್ಪುರ ಮತ್ತು ಬದೌನ್ ನಲ್ಲಿ ಮತದಾನ ನಡೆಯುತ್ತಿದ್ದು, ಭಾರೀ ಬಂದೋಬಸ್ತ್ ಮಾಡಲಾಗಿದೆ. ಉತ್ತರಾಖಂಡ್ ನಲ್ಲಿ ಒಟ್ಟು 69 ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ 628 ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರವಾಗಲಿದೆ.

74.20 ಲಕ್ಷ ಮಂದಿ ಹಕ್ಕು ಚಲಾಯಿಸುತ್ತಿದ್ದಾರೆ. ಕರ್ಣಪ್ರಯಾಗ್ ಕ್ಷೇತ್ರದ  ಬಿಜೆಪಿ ಅಭ್ಯರ್ಥಿ ಕುಲದೀಪ್ ಸಿಂಗ್ ಅವರು ಕಳೆದ ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರೋದ್ರಿಂದ ಈ ಕ್ಷೇತ್ರದ ಚುನಾವಣೆಯನ್ನು  ಮಾರ್ಚ್ 9ಕ್ಕೆ ಮುಂದೂಡಲಾಗಿದೆ. ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೇರ ಹಣಾಹಣಿ ಇದೆ. ನ್ಯಾಯಸಮ್ಮತ ಚುನಾವಣೆಗಾಗಿ 30,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...