alex Certify
ಕನ್ನಡ ದುನಿಯಾ       Mobile App
       

Kannada Duniya

ಗೋರಖ್ಪುರ ಆಸ್ಪತ್ರೆಯಲ್ಲಿ 63 ಮಕ್ಕಳ ಸಾವು : ಉನ್ನತ ತನಿಖೆಗೆ ಆದೇಶ

hosp

ಉತ್ತರಪ್ರದೇಶದ ಗೋರಖ್ಪುರದಲ್ಲಿರೋ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ದುರಂತ ಇಡೀ ದೇಶವನ್ನೇ ನಡುಗಿಸಿದೆ. ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಮಕ್ಕಳ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. ಲಿಕ್ವಿಡ್ ಆಕ್ಸಿಜನ್ ಪೂರೈಕೆಯಲ್ಲಾದ ವ್ಯತ್ಯಯದಿಂದ್ಲೇ ಮಕ್ಕಳು ಸಾವನ್ನಪ್ಪಿದ್ದಾರೆ ಅಂತಾ ಹೇಳಲಾಗ್ತಿದೆ.

ನವಜಾತ ಶಿಶುಗಳು ಕೂಡ ಮೃತಪಟ್ಟಿದ್ದು, ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಭೀಕರ ದುರಂತದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಮುಖ್ಯಸ್ಥರನ್ನು ಕರ್ತವ್ಯದಿಂದ ವಜಾ ಮಾಡಿರೋದಾಗಿ ಉತ್ತರಪ್ರದೇಶದ ಆರೋಗ್ಯ ಸಚಿವರು ತಿಳಿಸಿದ್ದಾರೆ. ಘಟನೆ ಬಗ್ಗೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಕೂಡ ಉತ್ತರಪ್ರದೇಶದಲ್ಲಿ ನಡೆದ ದುರ್ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಆಸ್ಪತ್ರೆಯ ಸದ್ಯದ ಸ್ಥಿತಿ ಬಗ್ಗೆ ವಿವರ ಪಡೆದಿದ್ದಾರೆ. ಆಸ್ಪತ್ರೆಗೆ ಪುಷ್ಪಾ ಪ್ರೈವೇಟ್ ಲಿಮಿಟೆಡ್ ಆಕ್ಸಿಜನ್ ಪೂರೈಕೆ ಮಾಡುತ್ತಿತ್ತು.

ಸರ್ಕಾರ ಬಾಕಿ ಪಾವತಿ ಮಾಡದ ಹಿನ್ನೆಲೆಯಲ್ಲಿ ಕಂಪನಿ ಏಕಾಏಕಿ ಲಿಕ್ವಿಡ್ ಆಕ್ಸಿಜನ್ ಪೂರೈಕೆಯನ್ನು ನಿಲ್ಲಿಸಿತ್ತು. ಇದರಿಂದ ಗೋರಖ್ಪುರ ಆಸ್ಪತ್ರೆಯಲ್ಲಿ ಶಿಶುಗಳ ಸಾವು ಸಂಭವಿಸಿದೆ. ಕಳೆದ 6 ದಿನಗಳಲ್ಲಿ 63 ಮಕ್ಕಳು ಸಾವನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರ ಹೊಸ ಪಕ್ಷ ಸ್ಥಾಪಿಸಿದರೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...