alex Certify
ಕನ್ನಡ ದುನಿಯಾ       Mobile App
       

Kannada Duniya

ಪುತ್ರಿಯ ಲವ್ವಿ ಡವ್ವಿ ಕಂಡು ಗುಂಡು ಹಾರಿಸಿದ ಅಪ್ಪ

up-love-fath

ಲಖ್ನೋ: ಉತ್ತರ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ತಂದೆಯೇ ಮಗಳ ಮೇಲೆ ಗುಂಡು ಹಾರಿಸಿದ್ದಾನೆ.

ಸಂಭಾಲ್ ನ ಅಸ್ಮೋಲಿ ಗ್ರಾಮದಲ್ಲಿ ಯುವತಿಯೊಬ್ಬಳು ಬಾಯ್ ಫ್ರೆಂಡ್ ಜೊತೆಗೆ ಫೋನ್ ನಲ್ಲಿ ಮಾತನಾಡಿದ್ದನ್ನು ಗಮನಿಸಿದ ತಂದೆ ಕೆಂಡಾಮಂಡಲವಾಗಿ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ.

ಮನೆಯಲ್ಲಿ ಒಬ್ಬಳೆ ಇದ್ದ ಯುವತಿ ಫೋನ್ ನಲ್ಲಿ ಮಾತನಾಡುತ್ತಿದ್ದು, ಈ ವೇಳೆ ಆಕೆಯ ತಂದೆ ಹಾಗೂ ಸಹೋದರ ಬಂದಿದ್ದಾರೆ.

ಪೋನ್ ನಲ್ಲಿ ಮಾತನಾಡಿದ್ದನ್ನು ಗಮನಿಸಿ ಹಲ್ಲೆ ನಡೆಸಿದ್ದು, ಬಳಿಕ ಗುಂಡು ಹಾರಿಸಲಾಗಿದೆ. ಅಕ್ಕಪಕ್ಕದವರು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಪೊಲೀಸರು ಗುಂಡು ಹಾರಿಸಿದ ವ್ಯಕ್ತಿ ಹಾಗೂ ಆತನ ಪುತ್ರನನ್ನು ವಶಕ್ಕೆ ಪಡೆದಿದ್ದಾರೆ. ಆಸ್ಪತ್ರೆಯಲ್ಲಿರುವ ಯುವತಿಯ ಸ್ಥಿತಿ ಗಂಭೀರವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...